ಗೋವಾ ಚಿತ್ರೋತ್ಸವದಿಂದ 'ಎಸ್ ದುರ್ಗಾ'(ಸೆಕ್ಸಿ ದುರ್ಗಾ) ಚಿತ್ರವನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿ ನಿರ್ದೇಶಕ ಸನಲ್ ಕುಮಾರ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಐಎಫ್‌ಎಫ್‌ಐ ಅಧಿಕಾರಿಗಳ ವಿರುದ್ಧ ಕೇರಳ ಹೈಕೋರ್ಟ್‌ನಲ್ಲಿ ಈ ಹಿಂದೆ ದೂರು ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಚಿತ್ರವನ್ನು ಐಎಫ್‌ಎಫ್‌ಐನಲ್ಲಿ ಪ್ರದರ್ಶಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚಿಸಿತ್ತು. ಚಿತ್ರೋತ್ಸವದ ಕೊನೆಯ ದಿನವಾದ ಇಂದು ಚಿತ್ರ ಪ್ರದರ್ಶನ ನಿಗದಿಯಾಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.