ಮಜಾ ಟಾಕೀಸ್
ಮಜಾ ಟಾಕೀಸ್

'ಮಜಾ ಟಾಕೀಸ್' ಹಾಸ್ಯ ಪಯಣ ಮುಗಿಸಿದ ಸೃಜನ್ ಲೋಕೇಶ್

ಮಜಾ ವಿತ್ ಸುಜಾ ಯಶಸ್ಸಿನ ನಂತರ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ ನಗುವಿನ ತೆರೆ ಎಳೆದಿದ್ದಾರೆ...
Published on
ಮಜಾ ವಿತ್ ಸುಜಾ ಯಶಸ್ಸಿನ ನಂತರ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ ನಗುವಿನ ತೆರೆ ಎಳೆದಿದ್ದಾರೆ. 
2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ. 
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರೆಲ್ಲಾ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು. 
ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಮಜಾ ಟಾಕೀಸ್ ಕಾರ್ಯಕ್ರಮದ ದೊಡ್ಡ ಪಯಣ ಕೊನೆಯ ಹಂತಕ್ಕೆ ಬಂದು ತಲುಪಿದೆ. ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಬರೆದಿದ್ದಾರೆ. 
ಮಜಾ ಕುಟುಂಬದಲ್ಲಿ ದೊಡ್ಡ ತಾರಾಗಣವೇ ಇತ್ತು. ಸೃಜನ್ ಲೋಕೇಶ್, ಇಂದ್ರಜಿತ್ ಲಂಕೇಶ್, ಮಂಡ್ಯ ರಮೇಶ್, ಅಪರ್ಣ, ಶ್ವೇತ ಚೆಂಗಪ್ಪ, ಕುರಿ ಪ್ರತಾಪ್, ಮಿಮಿಕ್ರಿ ದಯಾನಂದ್, ರೆಮೋ, ಪವನ್ ಸೇರಿದಂತೆ ಅನೇಕರು ಮಜಾ ಟಾಕೀಸ್ ಕುಟುಂಬದ ಸದಸ್ಯರಾಗಿದ್ದರು. 
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com