ವಿಜಯ್ ನಟನೆಯ ಮೆರ್ಸಲ್ ಚಿತ್ರದಲ್ಲಿ ಜಿಎಸ್ ಟಿ ಕುರಿತಂತೆ ತಪ್ಪು ಸಂದೇಶ ನೀಡಲಾಗಿದೆ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ತಮಿಳ್ಸಾಯಿ ಸೌಂದರ್ ರಾಜನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಚಿತ್ರದಲ್ಲಿ ರಾಜಕೀಯದ ಬಗ್ಗೆ ನೇರವಾಗಿ ಎಲ್ಲೂ ಮಾತನಾಡದೇ ಇದ್ದರೂ ಇತ್ತೀಚೆಗಷ್ಟೇ ಜಾರಿಯಾದ ಜಿಎಸ್ ಟಿ, ಡಿಜಿಟಲ್ ಇಂಡಿಯಾದ ಬಗ್ಗೆ ಪ್ರಸ್ತಾಪವಿದ್ದು, ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಹೀಗಾಗಿ ಚಿತ್ರದ ವಿವಾದಾತ್ಮಕ ಸಂಭಾಷಣೆಗೆ ಕತ್ತರಿ ಹಾಕಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಒಂದು ವೇಳೆ ಚಿತ್ರತಂಡ ಸಂಭಾಷಣೆಗೆ ಕತ್ತರಿ ಹಾಕದಿದ್ದರೆ ಚಿತ್ರತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು.