ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿರುವ ಸಾಹೋ ಚಿತ್ರದ ಪೋಸ್ಟರ್ ಚಿತ್ರದ ಕುರಿತ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಈ ಪೋಸ್ಟರ್‌ನಲ್ಲಿ ಪ್ರಭಾಸ್ ಅವರು ಕಪ್ಪುಬಣ್ಣದ ಗೌನ್ ಧರಿಸಿ, ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರಸ್ತೆಯಲ್ಲಿ ನಡೆದುಬರುತ್ತಿರುವಂತೆ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಅನ್ನು ಖ್ಯಾತ ಸಿನಿಮಾ ವಿಮರ್ಶಕ ಹಾಗೂ ಬಾಕ್ಸ್ ಆಫೀಸ್ ತಜ್ಞ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.