ನಟಿ ಐಶ್ವರ್ಯಾ ರೈ ತಾಯಿ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬೆಂಕಿ

ಮುಂಬೈನ ಬಾಂದ್ರಾದಲ್ಲಿರುವ ಐಶ್ವರ್ಯಾ ರೈ ಬಚ್ಚನ್ ಅವರ ತಾಯಿ ವಾಸವಾಗಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ
ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್
ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್
Updated on
ಮುಂಬಯಿ: ಮುಂಬೈನ ಬಾಂದ್ರಾದಲ್ಲಿರುವ ಐಶ್ವರ್ಯಾ ರೈ ಬಚ್ಚನ್ ಅವರ ತಾಯಿ ವಾಸವಾಗಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟದಲ್ಲಿ ದಟ್ಟ ಹೊಗೆ ಬರುತ್ತಿರುವ ವೀಡಿಯೋವನ್ನು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಹ ಲೈವ್‌ನಲ್ಲಿ ಹಂಚಿಕೊಂಡಿದ್ದಾರೆ.
ಬಾಂದ್ರಾದ ಪಶ್ಚಿಮದಲ್ಲಿರುವ ಈ ಕಟ್ಟಡದ 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಈ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸದಿದ್ದರೂ ಕ್ಷಣಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಐಶ್ವರ್ಯಾ ರೈ ಹಾಗೂ ಅಭಿಷೇಕ್ ಬಚ್ಚನ್ ಸಹ ತರಾತುರಿಯಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
ಇದೇ ವರ್ಷ ಐಶ್ವರ್ಯಾ ರೈ ಅವರ ತಂದೆ ಕೃಷ್ಣರಾಜ್ ರೈ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಅವರ ತಾಯಿ ವಾಸವಾಗಿರುವ ಕಟ್ಟಡಕ್ಕೆ ಬೆಂಕಿ ಬಿದ್ದಿರುವ ಕಾರಣ ಸಹಜವಾಗಿ ಅವರು ಆತಂಕಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com