ಫೆ.17 ರಂದು ರಾತ್ರಿ 7.30 ರ ಸುಮಾರಿಗೆ ತ್ರಿಶೂರ್ನಿಂದ ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಲಾಗಿತ್ತು. ನಂತರ ರಾತ್ರಿ ಪರಿವಟ್ಟಲಂ ಎಂಬಲ್ಲಿ ನಟಿಯನ್ನು ಕಾರಿನಲ್ಲೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು. ನಂತರ ನಟಿ ನಿರ್ದೇಶಕರೊಬ್ಬರ ಮನೆಗೆ ತೆರಳಿ ಅಲ್ಲಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಪ್ರಕರಣ ಸಂಬಂಧ 11ನೇ ಆರೋಪಿಯಾಗಿ ನಟ ದಿಲೀಪ್ ಅವರನ್ನು ಜುಲೈ10 ರಂದು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.