ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಯೇಸುದಾಸ್‌ಗೆ ಅನುಮತಿ

ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೆಸರಾಂತ ಗಾಯಕ ಕೆಜೆ ಯೇಸುದಾಸ್ ಗೆ ದೇವಸ್ಥಾನ ಆಡಳಿತ ಮಂಡಳಿ ಅನುಮತಿ ನೀಡಿದೆ.
ಯೇಸುದಾಸ್
ಯೇಸುದಾಸ್
Updated on
ತಿರುವನಂತಪುರ: ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೆಸರಾಂತ ಗಾಯಕ ಕೆಜೆ ಯೇಸುದಾಸ್‌ಗೆ ದೇವಸ್ಥಾನದ ಆಡಳಿತ ಮಂಡಳಿ ಅನುಮತಿ ನೀಡಿದೆ. 
ಸುಪ್ರೀಂಕೋರ್ಟ್ ನೇಮಿಸಿರುವ ಆಡಳಿತ ಮಂಡಳಿಯ ಸದಸ್ಯರು ವಿಶೇಷ ಸಭೆ ನಡೆಸಿ ಯೇಸುದಾಸ್ ಅವರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ಕುರಿತು ಚರ್ಚಿಸಿದರು. ಹಿಂದುತ್ವದ ಬಗ್ಗೆ ನಂಬಿಕೆ ಹೊಂದಿರುವ ಯಾರು ಬೇಕಾರದೂ ದೇವಸ್ಥಾನಕ್ಕೆ ಭೇಟಿ ನೀಡಬಹುದು. ಇದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 
ರೋಮನ್ ಕ್ಯಾಥೋಲಿಕ್ ಗೆ ಸೇರಿದ ಯೇಸುದಾಸ್ ಅವರಿಗೆ ಈ ಹಿಂದೆ ಗುರುವಾಯೂರಿನ ಕೃಷ್ಣ ದೇವಸ್ಥಾನ ಮತ್ತು ಕಡಂಪುಳ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯೇಸುದಾಸ್ ಅವರು ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿಗೆ ಅನುಮತಿ ಕೋರಿ ಪತ್ರ ಬರೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com