ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ನಿಧನ

ವರನಟ ಡಾ.ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಮೇ.31 ರಂದು ನಿಧನರಾಗಿದ್ದಾರೆ.
ಪಾರ್ವತಮ್ಮ ರಾಜ್ ಕುಮಾರ್
ಪಾರ್ವತಮ್ಮ ರಾಜ್ ಕುಮಾರ್
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78) ಮೇ.31 ರಂದು ನಿಧನರಾಗಿದ್ದಾರೆ. 
ಹಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಪಾರ್ವತಮ್ಮ ರಾಜ್ ಕುಮಾರ್ ನಗರದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಬೆಳಿಗ್ಗೆ 4:40 ಕ್ಕೆ ನಿಧನರಾದರೆಂದು ಎಂಎಸ್ ರಾಮಯ್ಯ ಆಸ್ಪತ್ರೆಯ ವೈದ್ಯ ಡಾ. ಸಂಜಯ್ ಕುಲಕರ್ಣಿ ಹೇಳಿದ್ದಾರೆ. 
ಕಳೆದ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೆ ತರಲಾಗಿದ್ದು, ಸದಾಶಿವ ನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಸಂಜೆ ವೇಳೆಗೆ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ. 
ಡಿಸೆಂಬರ್ 6, 1939ರಲ್ಲಿ ಮೈಸೂರಿನ ಸಾಲಿಗ್ರಾಮದಲ್ಲಿ ಜನಿಸಿದ ಪಾರ್ವತಮ್ಮ ವರನಟ ಡಾ. ರಾಜ್ ಕುಮಾರ್ ಅವರನ್ನು 1953 ಜೂ.25 ರಂದು ವಿವಾಹವಾಗಿದ್ದರು. ನಂತರ  ಚಿತ್ರರಂಗದ ಖ್ಯಾತ ನಿರ್ಮಾಪಕಿಯಾಗಿ ಬೆಳೆದ ಪಾರ್ವತಮ್ಮ ಅವರು ನಂಜುಂಡಿ ಕಲ್ಯಾಣ, ಗಜಪತಿ ಗರ್ವಭಂಗ ಸೇರಿ 80 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com