ಕತುವಾ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಲೂ ಅಸಹ್ಯವಾಗುತ್ತೆ; ಅಮಿತಾಭ್ ಬಚ್ಚನ್
ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ತಡವಾಗಿ ಖಂಡನೆ ವ್ಯಕ್ತಪಡಿಸಿರುವ ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು, ಪ್ರಕರಣ ಕುರಿತು ಮಾತನಾಡುವುದಕ್ಕೂ ಭಯವಾಗುತ್ತದೆ ಎಂದು ಗುರುವಾರ ಹೇಳಿದ್ದಾರೆ...
ಮುಂಬೈ: ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ತಡವಾಗಿ ಖಂಡನೆ ವ್ಯಕ್ತಪಡಿಸಿರುವ ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು, ಪ್ರಕರಣ ಕುರಿತು ಮಾತನಾಡುವುದಕ್ಕೂ ಭಯವಾಗುತ್ತದೆ ಎಂದು ಗುರುವಾರ ಹೇಳಿದ್ದಾರೆ.
ರಿಷಿ ಕಪೂರ್ ಅವರೊಂದಿಗೆ ಅಭಿನಯಿಸುತ್ತಿರುವ 102 ನಾಟ್ ಔಟ್ ಸಿನಿಮಾ ಬಿಡುಗಡೆ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅವರು, ಆ ವಿಷಯ ಮತ್ತೊಮ್ಮೆ ತೆಗೆಯಲು ಇಷ್ಟವಿಲ್ಲ. ಅದರ ಬಗ್ಗೆ ಮಾತನಾಡಲೂ ನನಗೆ ನೋವಾಗುತ್ತದೆ ಹಾಗೂ ಅಸಹ್ಯ ಹುಟ್ಟಿಸುತ್ತದೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಕಾಮುಕರು ಗುಂಪೊಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಘಟನೆಗೆ ಇಡೀ ದೇಶದಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ.