ಅಭಿಷೇಕ್ ಚೊಚ್ಚಲ ಚಿತ್ರಕ್ಕೆ ಮುಹೂರ್ತ ಫಿಕ್ಸ್?

ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಸ್ಯಾಂಡಲ್ ವುಡ್ ಗೆ ...
ಅಭಿಷೇಕ್ ಅಂಬರೀಷ್
ಅಭಿಷೇಕ್ ಅಂಬರೀಷ್

ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡುವ ಬಗ್ಗೆ ಅವರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ. ಸಂದೇಶ್ ಪ್ರೊಡಕ್ಷನ್ ನಡಿಯಲ್ಲಿ ಅಭಿಷೇಕ್ ಅಂಬರೀಷ್ ನಟಿಸಲು ಆರಂಭಿಸುತ್ತಾರೆ ಎಂಬ ಸುದ್ದಿಯಿದ್ದು ನಾಗಶೇಖರ್ ನಿರ್ದೇಶನ ಮಾಡುತ್ತಾರೆ ಮತ್ತು ಚಿತ್ರಕ್ಕೆ ಅಮರ್ ಎಂದು ಹೆಸರಿಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ, ಅದಿನ್ನೂ ಖಚಿತವಾಗಿಲ್ಲ.

ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಈ ಪ್ರಾಜೆಕ್ಟ್ ನ್ನು ಉತ್ತಮವಾಗಿ ಆರಂಭಿಸಲು ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಸಿನಿ ಎಕ್ಸ್ ಪ್ರೆಸ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಅಭಿಷೇಕ್ ಅವರ ಫೋಟೋಶೂಟ್ ಮಾಡಲು ಸಿದ್ಧತೆಗಳು ನಡೆಯುತ್ತಿದ್ದು ಮೇ ಮೊದಲ ವಾರದಲ್ಲಿ ಮಾಡುವ ನಿರೀಕ್ಷೆಯಿದೆ. ಅಂಬರೀಷ್ ಅವರ ಹುಟ್ಟುಹಬ್ಬ ಮೇ 29ರಂದು ಚಿತ್ರದ ಮುಹೂರ್ತ ನೆರವೇರಲಿದೆ ಎನ್ನಲಾಗುತ್ತಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಅಭಿಷೇಕ್ ಗೆ ಇದು ವಿಶೇಷ ಚಿತ್ರವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com