ಆಗಸ್ಟ್ 27ಕ್ಕೆ ಮುನಿರತ್ನ 'ಕುರುಕ್ಷೇತ್ರ' ಆಡಿಯೋ ರಿಲೀಸ್

ಚಾಲೆಂಜಿಂಗ್ ಸ್ಚಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಎಂದೇ ಹೇಳಲಾಗುತ್ತಿರುವ ಕುರುಕ್ಷೇತ್ರ ಆಡಿಯೋ ಜುಲೈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಬೇಕಿತ್ತು..
ಮುನಿರತ್ನ ಕುರುಕ್ಷೇತ್ರದ ಸ್ಟಿಲ್
ಮುನಿರತ್ನ ಕುರುಕ್ಷೇತ್ರದ ಸ್ಟಿಲ್
Updated on: 
ಬೆಂಗಳೂರು: ಬಹು ನಿರೀಕ್ಷಿತ ಪೌರಾಣಿಕ ಕುರುಕ್ಷೇತ್ರ ಸಿನಿಮಾ ರಿಲೀಸ್ ಗಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ, ಚಾಲೆಂಜಿಂಗ್ ಸ್ಚಾರ್ ದರ್ಶನ್ ಅಭಿನಯದ 50ನೇ ಸಿನಿಮಾ ಎಂದೇ ಹೇಳಲಾಗುತ್ತಿರುವ ಕುರುಕ್ಷೇತ್ರ ಆಡಿಯೋ ಜುಲೈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಆಗಸ್ಟ್ ತಿಂಗಳ ಅಂತ್ಯಕ್ಕೆ ಮುಂದೂಡಲಾಗಿದೆ.
ಲಹರಿ ಆಡಿಯೋ ಕಂಪನಿ ಮಾಲೀಕ ಲಹರಿ ವೇಲು ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ್ದಾರೆ, ಸಿಟಿ ಎಕ್ಸ್ ಪ್ರೆಸ್ ಗೆ ಈ ವಿಷಯ ಖಚಿತ ಪಡಿಸಿರುವ  ವೇಲು,  ಆಗಸ್ಟ್ 27 ರಂದು ಕುರುಕ್ಷೇತ್ರ ಆಡಿಯೋ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬಿಡುಗಡೆಗೆ ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗುತ್ತಿದ್ದು, ಸಮಯ, ಸ್ಥಳ ಕುರಿತಂತೆ ಎಲ್ಲಾ ಮಾಹಿತಿಗಳನ್ನು ಶೀಘ್ರವೇ ತಿಳಿಸಲಾಗುವುದು ಎಂದು ವೇಲು ಹೇಳಿದ್ದಾರೆ.
ಸಿನಿಮಾದಲ್ಲಿ 4 ಹಾಡುಗಳಿದ್ದು, ಶ್ಲೋಕ ಮತ್ತು ಸ್ಕಂದ ಪದ್ಯಗಳಿವೆ, ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com