ಅಂಬಿ ಅಮರ: ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸುಮಲತಾ ಅಂಬರೀಶ್!

ಸಂಕಷ್ಟ ಮತ್ತು ದುಃಖದ ಸಮಯದಲ್ಲಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಬೆಂಬಲಿಸಿ ನಿಂತ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ...
ಸುಮಲತಾ
ಸುಮಲತಾ
Updated on: 
ಬೆಂಗಳೂರು: ಸಂಕಷ್ಟ ಮತ್ತು ದುಃಖದ ಸಮಯದಲ್ಲಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಬೆಂಬಲಿಸಿ ನಿಂತ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. 
ಅಂಬಿ ಅಂತ್ಯಸಂಸ್ಕಾರದ ವೇಳೆ ಸಕಲ ಸರ್ಕಾರಿ ಗೌರವ ನೀಡಿದ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ಮಂಡ್ಯ ಜನತೆ ಹಾಗೂ ಅಭಿಮಾನಿಗಳಿಗೆ ಸುಮಲತಾ ಅವರು ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಸುಮಲತಾ ಅವರು, ನಿಮ್ಮ ಸಾಂತ್ವದ ಮಾತುಗಳು ಮತ್ತು ನಿಮ್ಮ ಪ್ರೀತಿಯ ನಡೆಗಳು ಈ ಸಂಕಷ್ಟದ ಹೊತ್ತಿನಲ್ಲಿ ನಮಗೆ ಶಕ್ತಿ ತುಂಬಿದವು. ನಾನು, ಅಭಿಶೇಕ್ ಮತ್ತು ಅಂಬರೀಶ್ ಇಡೀ ಕುಟುಂಬವು ಕರ್ನಾಟಕದ ಜನತೆಗೆ ಸದಾ ಕಾಲ ಅಬಾರಿಯಾಗಿರುತ್ತೇವೆ. ವಿಶೇಷವಾಗಿ ಅಂಬರೀಶ್ ಅವರನ್ನು ತಮ್ಮ ರಾಜನಂತೆ ಗೌರವಿಸಿ ಅತ್ಯಂತ ಪ್ರೀತಿಯಿಂದ ಕಳಿಸಿಕೊಟ್ಟ ಮಂಡ್ಯದ ಅಭಿಮಾನಿಗಳು ಮತ್ತು ಎಲ್ಲ ಅಭಿಮಾನಿಗಳಿಗೆ ನಾವುಗಳು ಯಾವಾಗಲು ಚಿರಋಣಿ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com