ಸ್ಯಾಂಡಲ್ ವುಡ್ ಖ್ಯಾತ ತಾರಾ ಜೋಡಿ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಹೆಣ್ಣು ಮಗುವಿನ ಜನ್ಮ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 6-10 ಕ್ಕೆ ಹೆಣ್ಣು ಮಗುವಿಗೆ ರಾಧಿಕಾ ಪಂಡಿತ್ ಜನ್ಮ ನೀಡಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ಯಶ್ ತಿಳಿಸಿದ್ದಾರೆ.
ಜೊತೆಗೆ ಯಶ್ ಮಗುವಿನೊಂದಿಗಿರುವ ಫೋಟೋ ಬಹಿರಂಗಗೊಂಡಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.