
ಬೆಂಗಳೂರು: ಮನದಾಸೆಯಂತೆ ಜನಿಸಿದ ಮುದ್ದಿನ ಮಗಳ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತನ್ನ ಮುದ್ದಿನ ಮಗಳ ಪುಟ್ಟಹಸ್ತದೊಂದಿಗೆ ಯಶ್ ಕೈ ಬೆರಳಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
“ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ ಮೇಲಂತೂ ಅವಳೊಂದಿಗೆ ನನ್ನ ಪ್ರೀತಿ ನೂರ್ಮಡಿಯಾಗಿದೆ” ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.
Advertisement