ಬೆಂಗಳೂರು: ನಟ, ನಿರ್ದೇಶಕ ಎಸ್. ನಾರಾಯಣ್ ಅವರ ತಾಯಿ ವಿಧಿವಶರಾಗಿದ್ದಾರೆ. ಎಸ್. ನಾರಾಯಣ್ ಅವರ ತಾಯಿ ಕಮಲಮ್ಮ(84) ಮಂಗಳವಾರ ರಾತ್ರಿ ಅನಾರೋಗ್ಯದಿಂದ ಮರಣ ಹೊಂದಿದ್ದಾರೆ..ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಮಲಮ್ಮ ಕಳೆದ 25 ದಿನಗಳಿಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು..ಅಗಲಿದ ಕಮಲಮ್ಮ ದಿ. ವರದರಾಜ್ ಅವರ ಪತ್ನಿಯಾಗಿದ್ದು ಎಸ್. ನಾರಾಯಣ್ ಸೇರಿ ಮೂವರು ಗಂಡುಮಕ್ಕಳನ್ನು ಅಗಲಿದ್ದಾರೆ..ಕಮಲಮ್ಮ ಅಂತ್ಯಕ್ರಿಯೆ ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿರುವ ಚಿತಾಗಾರದಲ್ಲಿ ಬುಧವಾರ ಸಂಜೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ಸ್ಪಷ್ತಪಡಿಸಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos