ಕೆಜಿಎಫ್ ಚಿತ್ರ ಕರ್ನಾಟಕದ ಹಲವೆಡೆ ಇಂದು ಮುಂಜಾನೆ 4ಗಂಟೆಗೆ ಮೊದಲ ಪ್ರದರ್ಶನ ಕಂಡಿದ್ದು, ಚಿತ್ರ ನೋಡಿದಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಚಿತ್ರ ಏಕಕಾಲಕ್ಕೆ ಬಿಡುಗಡೆಯಾಗಿದ್ದು, ಸಿನಿಮಾದ ಹಿಂದಿ ಅವತರಣಿಕೆಯು ಒಂದು ಸಾವಿರ ಥಿಯೇಟರ್ ಗಳಲ್ಲಿ ಪ್ರದರ್ಶನ ಕಂಡಿದೆ. ಅಂತೆಯೇ ಕರ್ನಾಟಕದಲ್ಲಿ 350ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಇಡೀ ಭಾರತೀಯ ಚಿತ್ರ ರಂಗವೇ ತಿರುಗಿ ನೋಡುವಂತೆ ಸೌಂಡ್ ಮಾಡುತ್ತಿದೆ.