
ಮೀರತ್ : ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದೆ ಎಂದು ಹೇಳಿಕೆ ನೀಡಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಶಾ ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನದಂದು ಪಾಕಿಸ್ತಾನಕ್ಕೆ ಹೋಗುವಂತೆ ನವ ನಿರ್ಮಾಣ ಸೇನೆ ಟಿಕೆಟ್ ಬುಕ್ ಮಾಡಿದೆ.
ಭಾರತದಲ್ಲಿರಲು ನಾಸಿರುದ್ದೀನ್ ಶಾಗೆ ಭಯ ಇದ್ದರೆ, ಪಾಕಿಸ್ತಾನಕ್ಕೆ ಹೋಗಬಹುದು. ಆಗಸ್ಟ್ 14 ರಂದು ಪಾಕಿಸ್ತಾನ ತೆರಳಲು ಟಿಕೆಟ್ ಬುಕ್ ಮಾಡಿಸಲಾಗಿದೆ. ಅವರಂತೆಯೇ ಬೇರೆ ಯಾರಿಗಾದರೂ ಭಯ ಕಾಡಿದರೆ ಪಾಕಿಸ್ತಾನಕ್ಕೆ ಕಳುಹಿಸಲು ನಮ್ಮ ಸೇನೆ ವಿಮಾನದ ಟಿಕೆಟ್ ಬುಕ್ ಮಾಡಲಿದೆ ಎಂದು ನವ ನಿರ್ಮಾಣ ಸೇನೆಯ ಮುಖ್ಯಸ್ಥ ಅಮಿತ್ ಜೈನ್ ಹೇಳಿದ್ದಾರೆ.
ಇತ್ತೀಚಿಗೆ ಬುಲಂದರ್ ಶಾ ಹಿಂಸಾಚಾರ ಕುರಿತಂತೆ ನಾಸಿರುದ್ದೀನ್ ಶಾ ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಅವರನ್ನು ರಾಷ್ಟ್ರದ್ರೋಹಿ ಎಂದು ಅಮಿತ್ ಜೈನ್ ಕರೆದಿದರಲ್ಲದೇ, ಪಾಕಿಸ್ತಾನಕ್ಕೆ ಹೋಗಿ ನೆಲೆಸುವಂತೆ ಹೇಳಿಕೆ ನೀಡಿದ್ದರು.
ಸಾಮಾಜಿಕ ಜಾಲತಾಣಗಳಲ್ಲಿ ಶಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ಶಾ, ನಾನು ಪ್ರೀತಿಸುವ ದೇಶ ನನಗೆ ಮನೆ ಇದ್ದಂತೆ. ಅದರ ಬಗ್ಗೆ ಕಾಳಜಿ ವ್ಯಕ್ತಪಡಿಸುವುದು ಅಪರಾಧವೇ, ನನ್ನನ್ನು ಟೀಕಿಸುವವರಂತೆ ನನಗೂ ಟೀಕಿಸುವ ಹಕ್ಕಿದೆ. ಆದರೆ, ಅದಕ್ಕಾಗಿ ದೇಶದ್ರೋಹಿ ಎಂದು ಕರೆಸಿಕೊಳ್ಳಬೇಕೆ ಎಂದು ಟ್ವೀಟ್ ಮಾಡಿದ್ದಾರೆ.
Advertisement