ಉಪೇಂದ್ರ, ಮನೋಹರ್, ಸುನಿಲ್ ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದ ಕಾಶಿನಾಥ್ ಅವರು ತಮ್ಮ ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ಕೈಚಳಕ ತೋರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ ಚಿತ್ರಗಳು ಕಾಶಿನಾಥ್ ಅವರ ಪ್ರಮುಖ ಚಿತ್ರಗಳಾಗಿದ್ದು, ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯತೆಯನ್ನು ಗಳಿಸಿತ್ತು.11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್‍ವುಡ್‍ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.