ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳವಂತೆ ರಾಷ್ಟ್ರೀಯ ಚಲನಚಿತ್ರ ಸಂಸ್ಥೆ ಸೌತ್ ಇಂಡಿಯನ್ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಗೆ ತಿಳಿಸಿದೆ.
ಕಾವೇರಿ ನದಿ ನೀರಿನ ವಿಚಾರವಾಗಿ ರಜನಿಕಾಂತ್ ಕರ್ನಾಟಕದ ವಿರುದ್ಧವಾಗಿ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು. ಹೀಗಾಗಿ ರಜನಿ ಅಭಿನಯದ ಕಾಲ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಬಾರದೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಲಾಗಿತ್ತು.
ಕರ್ನಾಟಕದಲ್ಲಿ ಯಾವುದೇ ಸರ್ಕಾರ ಬಂದರೂ,ಸುಪ್ರೀಂಕೋರ್ಟ್ ನ ಆದೇಶವನ್ನು ಅನುಷ್ಠಾನಗೊಳಿಸಬೇಕು ಎಂದು ರಜನಿ ಕಾಂತ್ ಹೇಳಿದ್ದರು. ಹೀಗಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕಾಲ ಚಿತ್ರ ಬಿಡುಗಡೆ ರದ್ಧಗೊಳಿಸಿತ್ತು.
ಭಾರತೀಯ ಚಲನ ಚಿತ್ರ ಒಕ್ಕೂಟದ ಅಧ್ಯಕ್ಷೆ, ಸಾಕ್ಷಿ ಮೆಹ್ರಾ ದಕ್ಷಿಣ ಭಾರತೀಯ.ಚಲನ ಚಿತ್ರ ಒಕ್ಕೂಟಕ್ಕೆ ಮನವಿ ಮಾಡಿದ್ದು, ಚಿತ್ರರಂಗದ ಹಿತಾಸಕ್ತಿಯಿಂದ ಕಾಲಾ ಸಿನಿಮಾ ರಿಲೀಸ್ ಮಾಡಿಸಬೇಕೆಂದು ಹೇಳಿದ್ದಾರೆ.
ಈ ಸಂಬಂಧ ಎಸ್ ಐಎಫ್ ಸ್ಸಿ ಕಾರ್ಯದರ್ಶಿ ಎಲ್. ಸುರೇಶ್, ಕರ್ನಾಟಕ ಚಲನಚಿತ್ರ ಮಂಡಳಿಗೆ ಮನವಿ ಮಾಡಿದ್ದು, ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಹೇಳಿತ್ತು, ಈ ಸಂಬಂಧ ಸಾ.ರಾ ಗೋವಿಂದು ಅವರಿಗೆ ಪತ್ರ ಬರೆದಿದ್ದು ರಾಜಕೀಯವನ್ನು ಸಿನಿಮಾದೊಂದಿಗೆ ಬೆರಸಬೇಡಿ ಎಂದು ತಿಳಿಸಲಾಗಿದೆ ಎಂದಿದ್ದಾರೆ,
ಮುಖ್ಯಮಂತ್ರಿ ಕುಮಾರ ಸ್ವಾಮಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟ ರಜನೀಕಾಂತ್ ಅಭಿಮಾನಿಗಳು ಆಗ್ರಹಿಸಿದ್ದಾರೆ