ಕಾಮಿಡಿ ಕಿಲಾಡಿಗಳು-2 ವಿಜೇತ ಮಡೆನೂರು ಮನು!

ಹಾಸನದ ಮಡೆನೂರು ಮನು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹೊರಹೊಮ್ಮಿದ್ದಾರೆ...
ಮಡೆನೂರು ಮನು
ಮಡೆನೂರು ಮನು
ಬೆಂಗಳೂರು: ಹಾಸನದ ಮಡೆನೂರು ಮನು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹೊರಹೊಮ್ಮಿದ್ದಾರೆ. 
ಇನ್ನು ರಾಮದುರ್ಗದ ಅಪ್ಪಣ್ಣ ಮತ್ತು ಮಂಗಳೂರಿನ ಸೂರಜ್ ಜಂಟಿಯಾಗಿ ದ್ವಿತೀಯ ಸ್ಥಾನ ಪಡೆದಿದ್ದರೆ ಕುಂದಾಪುದ ಸೂರ್ಯ  ಮೂರನೇ ಸ್ಥಾನ ಪಡೆದಿದ್ದಾರೆ. 
ವಿಜೇತ ಮಡೆನೂರು ಮನು ಅವರಿಗೆ 5 ಲಕ್ಷ ಚೆಕ್ ಮತ್ತು ಟ್ರೋಫಿ ನೀಡಲಾಯಿತು. ದ್ವಿತೀಯ ಸ್ಥಾನ ಪಡೆದಿದ್ದ ಅಪ್ಪಣ್ಣ ಮತ್ತು ಸೂರಜ್ ಗೆ ತಲಾ ಎರಡು ಲಕ್ಷ ಬಹುಮಾನ ಮತ್ತು ಟ್ರೋಫಿ, ಮೂರನೇ ಸ್ಥಾನ ಪಡೆದ ಸೂರ್ಯಗೆ 1 ಲಕ್ಷ ಬಹುಮಾನ ಮತ್ತು ಟ್ರೋಫಿ ನೀಡಲಾಯಿತು. 
ಕಾಮಿಡಿ ಕಿಲಾಡಿಗಳು ಸೀಸನ್ 2 ಫೈನಲ್ ಸ್ಪರ್ಧೆ ವಿಜಯಪುರದಲ್ಲಿ ನಡೆದಿದ್ದು ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಆಗಮಿಸಿದ್ದರು. ತೀರ್ಪುಗಾರರ ಅಂಕಗಳು ಮತ್ತು ವೀಕ್ಷಕರ ಎಸ್ಎಂಎಸ್ ಆಧರಿಸಿ ವಿಜೇತರನ್ನು ಆಯ್ಕೆ ಮಾಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com