ಮುಂಬೈ: ಬಾಲಿವುಡ್ ಹಿರಿಯ ನಟಿ ಶಮ್ಮಿ (87) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ.
ಜುಹು ಸರ್ಕಲ್ ನಲ್ಲಿರುವ ಮನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬಾಲಿವುಡ್ ಹಿರಿಯ ನಟಿ ಅಶೋಕ್ ಶೇಖರ್ ಹೇಳಿದ್ದಾರೆ,
ಶಮ್ಮಿ ನಿಧನದ ಸುದ್ದಿಯನ್ನು ಖ್ಯಾತ ಫ್ಯಾಷನ್ ಡಿಸೈನರ್ ಸಂದೀಪ್ ಖೋಸ್ಲಾ ಇನ್ಸ್ಟಾಗ್ರಾಮ್ ಮೂಲಕ ತಿಳಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಓಶಿವಾರಾದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ, ಶಮ್ಮಿ ನಿಜವಾದ ಹೆಸರು ನರ್ಗಿಸ್, ಬಾಲಿವುಡ್ ಸಿನಿಮಾ ನಿರ್ಮಾಪಕ ಸುಲ್ತಾನ್ ಅಹ್ಮದ್ ಅವರನ್ನು ವಿವಾಹವಾಗಿದ್ದರು.
ಬಾಲಿವುಡ್ನಲ್ಲಿ ಶಮ್ಮಿ ಅವರನ್ನು ಎಲ್ಲರೂ ಪ್ರೀತಿಯಿಂದ ಶಮ್ಮಿ ಆಂಟಿ ಎಂದು ಕರೆಯುತ್ತಿದ್ದರು. 18 ವರ್ಷಗಳ ವಯಸ್ಸಿನಲ್ಲಿ ಬಣ್ಣದ ಜಗತ್ತಿಗೆ ಅಡಿಯಿಟ್ಟ ಅವರು ಉಸ್ತಾದ್ ಪೆಡ್ರೋ ಚಿತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಕಾಮಿಡಿ ಪಾತ್ರಗಳಿಂದ ಎಲ್ಲರನ್ನೂ ರಂಜಿಸುತ್ತಿದ್ದ ಅವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.