ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿ ಲುಕ್ ಟೆಸ್ಟ್!
ಕಿರಿಕ್ ಪಾರ್ಟಿ ಚಿತ್ರದ ಯಶಸ್ಸಿನ ನಂತರ ರಕ್ಷಿತ್ ಶೆಟ್ಟಿ ಯಾವ ಚಿತ್ರಕ್ಕೆ ಬಣ್ಣ ಹಚ್ಚುತ್ತಾರೆ ಎಂಬ ಕುತೂಹಲ ಮೂಡಿತ್ತು. ಅಂತೆ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು...
ಕಿರಿಕ್ ಪಾರ್ಟಿ ಚಿತ್ರದ ಯಶಸ್ಸಿನ ನಂತರ ರಕ್ಷಿತ್ ಶೆಟ್ಟಿ ಯಾವ ಚಿತ್ರಕ್ಕೆ ಬಣ್ಣ ಹಚ್ಚುತ್ತಾರೆ ಎಂಬ ಕುತೂಹಲ ಮೂಡಿತ್ತು. ಅಂತೆ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿತ್ತು.
ಇದೀಗ ಅದಕ್ಕೆ ಕಾಲ ಕೂಡಿಬಂದಿದ್ದು ಚಿತ್ರದ ಮುಹೂರ್ತ ಮಾರ್ಚ್ 15ಕ್ಕೆ ನಡೆಯಲಿದ್ದು ಮಾರ್ಚ್ 20ರಂದು ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಮೊದಲಿಗೆ ಬೆಂಗಳೂರಿನ ಪಾಲೇಸ್ ನಲ್ಲಿ ಚಿತ್ರೀಕರಣ ನಡೆಯಲಿದ್ದು ನಂತರ ಕಂಠೀರವ ಸ್ಟುಡಿಯೋದಲ್ಲಿ ದೊಡ್ಡ ಸೆಟ್ ನಲ್ಲಿ ಚಿತ್ರೀಕರಣ ನಡೆಯಲಿದೆ.
ಮೊದಲಿಗೆ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿಯ ಲುಕ್ ಟೆಸ್ಟ್ ಮಾರ್ಚ್ 13ರಂದು ನಡೆಯಲಿದ್ದು ಮುಹೂರ್ತದ ದಿನ ರಕ್ಷಿತ್ ಶೆಟ್ಟಿ ಲುಕ್ ಅನಾವರಣ ಆಗಲಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಈ ಸಿನಿಮಾದಲ್ಲಿ ಶಾನ್ವಿ ಶ್ರೀವತ್ಸವ್, ಅಚ್ಯುತ್ ಕುಮಾರ್ ಮತ್ತು ಬಾಲಾಜಿ ಮನೋಹರ್ ಕಾಣಿಸಿಕೊಳ್ಳಲಿದ್ದಾರೆ.
ಅವನೇ ಶ್ರೀಮನ್ನಾರಾಯಣ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನ್ ಮತ್ತು ಕೆಹೆಚ್ ಪ್ರಕಾಶ್ ಚಿತ್ರವನ್ನು ನಿರ್ಮಿಸಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಲಿದ್ದು ಕರ್ಮ್ ಚಾವ್ಲಾ ಛಾಯಾಗ್ರಹಣವಿರಲಿದೆ.