ಜಗ್ಗೇಶ್
ಸಿನಿಮಾ ಸುದ್ದಿ
ಕವಿರಾಜ್ ನಿರ್ದೇಶನದ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಎನ್‌ಕೌಂಟರ್ ಸ್ಪೆಷಲಿಸ್ಟ್!
ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಇಳಿ ವಯಸ್ಸಿನಲ್ಲೂ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.
ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗೆ ಇಳಿ ವಯಸ್ಸಿನಲ್ಲೂ ಪ್ರಯೋಗಾತ್ಮಕ ಚಿತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ.
ನವನಿರ್ದೇಶಕ ಹರಿಕೃಷ್ಣ ನಿರ್ದೇಶನದ 8ಎಂಎಂ ಚಿತ್ರದಲ್ಲಿ ಜಗ್ಗೇಶ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ನಂತರ ಕವಿರಾಜ್ ನಿರ್ದೇಶನದಲ್ಲಿ ಚಿತ್ರದಲ್ಲಿ ಜಗ್ಗೇಶ್ ಎನ್‌ಕೌಂಟರ್ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಗೀತರಚನೆಗಾರ ಕವಿರಾಜ್ ಅವರು ಮದುವೆಯ ಮಮತೆಯ ಕರೆಯೋಲೆ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದರು. ಮೊದಲಿಗೆ ರೋಮ್ಯಾಂಟಿಕ್ ಚಿತ್ರವನ್ನು ನಿರ್ದೇಶಿಸಿದ್ದ ಕವಿರಾಜ್ ಇದೀಗ ಥ್ರಿಲ್ಲರ್ ಕತೆಯನ್ನು ಕೈಗೆತ್ತಿಕೊಂಡಿದ್ದಾರೆ.
ಚಿತ್ರದ ಒನ್ ಲೈನ್ ಸ್ಟೋರಿ ಕೇಳಿರುವ ಜಗ್ಗೇಶ್ ಚಿತ್ರದಲ್ಲಿ ಅಭಿನಯಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ.
ಏಪ್ರಿಲ್ ಅಥವಾ ಮೇನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ನಿರ್ಧರಿಸಿದ್ದು ಚಿತ್ರಕ್ಕೆ ಗುರುಕಿರಣ್ ಸಂಗೀತ ಸಂಯೋಜಿಸುತ್ತಿದ್ದು ಎವಿ ಕೃಷ್ಣಕುಮಾರ್ ಅವರ ಛಾಯಾಗ್ರಹಣವಿರಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ