ವರದಕ್ಷಿಣೆ ಕಿರುಕುಳ: ಪತಿ ವಿರುದ್ಧ ಪೋಲೀಸ್ ದೂರು ನೀಡಿದ ಸ್ಯಾಂಡಲ್ ವುಡ್ ನಟಿ

ಪತಿಯ ಕಿರುಕುಳಕ್ಕೆ ಬೇಸತ್ತ ಸ್ಯಾಂಡಲ್ ವುಡ್ ನಟಿಯೊಬ್ಬರು ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ಪೋಲೀಸ್ ದೂರು ಸಲ್ಲಿಸಿದ್ದಾರೆ.
ಕನ್ನಡ ಚಿತ್ರ ನಟಿ ಚೈತ್ರಾ
ಕನ್ನಡ ಚಿತ್ರ ನಟಿ ಚೈತ್ರಾ
ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತ ಸ್ಯಾಂಡಲ್ ವುಡ್ ನಟಿಯೊಬ್ಬರು ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿ ಪೋಲೀಸ್ ದೂರು ಸಲ್ಲಿಸಿದ್ದಾರೆ.
ಕನ್ನಡ ಚಿತ್ರ ನಟಿ ಚೈತ್ರಾ ಪೋತ್​ರಾಜ್​ ಬದುಕಲ್ಲಿ ಸಮಸ್ಯೆ ಎದುರಾಗಿದ್ದು ಆಕೆ ತನ್ನ ಪತಿ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು​ ದಾಖಲು ಮಾಡಿದ್ದಾರೆ. 
ಖುಷಿ  ಚಿತ್ರದ ನಾಯಕಿ ಚೈತ್ರಾ, ಪತಿ ಪರಸ್ತ್ರೀಯೊಡನೆ ಅನೈತಿಕ ಸಂಬಂಧ ಹೊಂದಿದ್ದಾರೆ, ಅದನ್ನು ಪ್ರಶ್ನಿಸಿದ್ದಕ್ಕಾಗಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಎಫ್ ಐ ಆರ್ ದಾಖಲು ಮಾಡಿದ್ದಾರೆ.
2006ರಲ್ಲಿ ಚೈತ್ರಾ ಹಾಗೂ ಬಾಲಾಜಿ ಪೋತ್​ರಾಜ್​ ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಇದೀಗ ಇಬ್ಬರ ನಡುವಿನ ಸಂಬಂಧದಲ್ಲಿ ಬಿರುಕು ಉಂಟಾಗಿದ್ದು ನಟಿ ಚೈತ್ರಾ ಮಾರ್ಚ್​ 17 ರಂದು ಪತಿಯ ವಿರುದ್ಧ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com