ಹಿರಿಯ ನಟಿ ಜಯಂತಿ
ಹಿರಿಯ ನಟಿ ಜಯಂತಿ

ನಟಿ ಜಯಂತಿ ಆರೋಗ್ಯ ಸ್ಥಿರ: ಅನಗತ್ಯ ವದಂತಿ ಹರಡದಂತೆ ಕುಟುಂಬಸ್ಥರ ಮನವಿ

ಅಸ್ತಮಾ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಬುಧವಾರ ತಿಳಿದುಬಂದಿದೆ...
Published on
ಬೆಂಗಳೂರು: ಅಸ್ತಮಾ ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಬುಧವಾರ ತಿಳಿದುಬಂದಿದೆ. 
ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿಯವರು ನಿಧನ ಹೊಂದಿದ್ದಾರೆಂದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿತ್ತು. ವದಂತಿಯನ್ನು ನಂಬಿದ್ದ ಜನರು ಅಂತಿಮ ಸಂದೇಶಗಳನ್ನು ಬರೆದು ಸಂತಾಪ ಸೂಚಿಸಿದ್ದರು. 
ವದಂತಿಗಳನ್ನು ತಿರಸ್ಕರಿಸಿರುವ ಜಯಂತಿಯವರ ಕುಟುಂಬಸ್ಥರು ವದಂತಿಗಳನ್ನು ಹರಡದಂತೆ ಮನವಿ ಮಾಡಿಕೊಂಡಿದ್ದಾರೆ. 
ಜಯಂತಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಕೃತಕ ಉಸಿರಾಟ ವ್ಯವಸ್ಥೆ ತೆರವುಗೊಳಿಸುವುದಾಗಿ ವೈದ್ಯರು ತಿಳಿಸಿದ್ದಾರೆ. 
ಆಂತಕಪಡಬೇಕಾದ ಅಗತ್ಯವಿಲ್ಲ. ಆರೋಗ್ಯದಲ್ಲಿ ಚೇತರಿಕೆ ಉಂಟಾಗಿದ್ದು, 2-3 ದಿನಗಳಲ್ಲಿ ಆಸ್ಪತ್ರೆಯಿಂದ ಬಿಡಿಗಡೆ ಮಾಡುವುದಾಗಿ ವೈದ್ಯರು ಭರವಸೆ ನೀಡಿದ್ದಾರೆ. ಆದರೆ, ಮಂಗಳವಾರ ಸಂಜೆ ವೇಳೆಗೆ ಜಯಂತಿ ಅವರು ಮೃತಪಟ್ಟಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಅನಗತ್ಯವಾಗಿ ವದಂತಿಗಳನ್ನು ಹಬ್ಬಿಸಬೇಡಿ, ಸೋಮವಾಗ ಅಮ್ಮನಿಗೆ ಪ್ರಜ್ಞೆ ಇರಲಿಲ್ಲ. ಮಂಗಳವಾರ ಆರೋಗ್ಯ ವಿಚಾರಿಸಲು ಬಂದವರಿಗೆ ಸ್ಪಂದಿಸುತ್ತಿದ್ದಾರೆ. ಬುಧವಾರ ತೀವ್ರ ನಿಗಾ ಘಟಕದಿಂದ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸುವ ಭರವಸೆ ನೀಡಿದ್ದಾರೆಂದು ಜಯಂತಿಯವರ ಪುತ್ರ ಕೃಷ್ಣ ಕುಮಾರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com