ಶನಿವಾರ ನಟ ದರ್ಶನ್ ಅವರು ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದು, ನಾಗನಹಳ್ಳಿಯಲ್ಲಿ ಜೆಡಿಎಸ್ ಕಾಯಕರ್ತರು ಪ್ರತಿಭಟನೆ ನಡೆಸಿ ವಿರೋಧ ತೋರಿದ್ದಾರೆ. ಅಂಬರೀಷ್ ಅವರ ಸಚಿವ ಸ್ಥಾನ ಕಿತ್ತುಕೊಂಡಾಗ ಯಾಕೆ ಮಾತನಾಡಲಿಲ್ಲ, ಕಾವೇರಿ ಪರ ಹೋರಾಟ ಯಾಕೆ ಮಾಡಲಿಲ್ಲ ಎಂದು ಪ್ರತಿಭಟನಾ ನಿರತರು ದರ್ಶನ್ ಅವರನ್ನು ಪ್ರಶ್ನಿಸಿದ್ದಾರೆ.