ಚುನಾವಣೆ ಬ್ರೇಕ್ ನಂತರ, ಸೀತಾರಾಮ ಕಲ್ಯಾಣ ಚಿತ್ರೀಕರಣದಲ್ಲಿ ನಿಖಿಲ್ ಕುಮಾರ್ ಭಾಗಿ!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್...
ನಿಖಿಲ್ ಕುಮಾರ್
ನಿಖಿಲ್ ಕುಮಾರ್
Updated on: 
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಮತ್ತೆ ತಮ್ಮ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. 
ಎ. ಹರ್ಷ ನಿರ್ದೇಶನದ ಸೀತಾರಾಮ ಕಲ್ಯಾಣ ಚಿತ್ರದ ಚಿತ್ರೀಕರಣದಲ್ಲಿ ನಿಖಿಲ್ ಕುಮಾರ್ ಭಾಗಿಯಾಗಿದ್ದಾರೆ. ಚುನಾವಣೆ ಕೆಲಸಗಳನ್ನು ಜವಾಬ್ದಾರಿಯುತವಾಗಿ ಮುಗಿಸಿ ಮತ್ತೆ ಕೆಲಸಕ್ಕೆ ಹಾಜರಾಗಿದ್ದೇನೆ ಎಂದು ನಿಖಿಲ್ ಹೇಳಿದ್ದಾರೆ. 
ಸಾಹಸ ನಿರ್ದೇಶಕರಾದ ರಾಮ-ಲಕ್ಷ್ಮಣ್ ಅವರು ಸೀತಾರಾಮ ಕಲ್ಯಾಣ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶಿಸಿದ್ದು ಫೈಟ್ ಸೀನ್ ಗಳಲ್ಲಿ ನಿಖಿಲ್ ಕುಮಾರ್ ಭಾಗಿಯಾಗಿದ್ದಾರೆ. ಮುಂದಿನ ಹತ್ತುಗಳಲ್ಲ ಕಾಲ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. 
ಸದ್ಯ ಚಿತ್ರದ ಚಿತ್ರೀಕರಣ ಅರ್ಧದಷ್ಟು ಮುಕ್ತಾಯವಾಗಿದ್ದು 55 ದಿನಗಳ ಶೆಡ್ಯೂಲ್ ನಲ್ಲಿ ಉಳಿದ ಭಾಗದ ಚಿತ್ರೀಕರಣ ಮುಕ್ತಾಯವಾಗಲಿದೆ. ನಂತರ ಪೋಸ್ಟ್ ಪ್ರೊಡೆಕ್ಷನ್ ಕೆಲಸಗಳು ನಡೆಯಲಿದ್ದು ಇದೇ ವರ್ಷ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ ಎಂದರು. 
ಚನ್ನಾಂಬಿಕ ಪ್ರೊಡೆಕ್ಷನ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು ರಚಿತಾ ರಾಮ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೆ ಸ್ವಾಮಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com