
ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ. ಅಕ್ಟೋಬರ್ 29 ರ ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ.
ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯಲ್ಲಿ ವಸುಂಧರಾ ದಾಸ್ ಹೋಗುತ್ತಿದ್ದಾಗ, ಕ್ಯಾಬ್ ಚಾಲಕ ಭಾಷ್ಯಂ ಸರ್ಕಲ್ ಸಿಗ್ನಲ್‌ನಿಂದ ಹಿಂಬಾಲಿಸಿಕೊಂಡು ಬಂದಿದ್ದಾನೆ. ಇಟಿಯೋಸ್ ಕಾರಿನಲ್ಲಿ ಬಂದ ಆತ ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಕಾರು ಅಡ್ಡಗಟ್ಟಿದ್ದಾನೆ. ಬಳಿಕ ಆತ ಕಾರಿನಿಂದ ಇಳಿದು ವಸುಂಧರಾ ದಾಸ್ ಕಾರಿನ ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದೇ ವೇಳೆ ವಸುಂಧರಾ ದಾಸ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ವಸುಂಧರಾ ದಾಸ್ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳಗೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ. ಅಷ್ಟರಲ್ಲಾಗಲೇ ಕ್ಯಾಬ್ ಚಾಲಕ ಸ್ಥಳದಿಂದ ತೆರಳಿದ್ದಾನೆ.
ಈ ಬಗ್ಗೆ ವಸುಂಧರಾ ದಾಸ್ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಷನ್ 509 341, 364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Advertisement