ಹೌದು.. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಿತ್ರದ ಹವಾ ಎಷ್ಟರ ಮಟ್ಟಿಗಿದೆ ಅಂದ್ರೆ, ಖ್ಯಾತ ಸಿನಿಮಾ ರೇಟಿಂಗ್ ವೆಬ್ ಸೈಟ್ ಐಎಂಡಿಬಿಯ ಮೋಸ್ಟ್ ಆ್ಯಂಟಿಸಿಪೇಟೆಡ್ ಗ್ಲೋಬಲ್ ಮೂವಿಸ್ ಹಾಗೂ ಟಿವಿ ಟ್ರೆಂಡಿಂಗ್ ನ ಹಲವು ಭಾಷೆಗಳ ಚಿತ್ರಗಳ ಲಿಸ್ಟ್ನಲ್ಲಿ 3ನೇ ಸ್ಥಾನದಲ್ಲಿದೆ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ಝೀರೋ ಚಿತ್ರ, ಅಮೀರ್ ಖಾನ್ ಅಭಿನಯದ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರಗಳನ್ನು ಕೆಜಿಎಫ್ ಹಿಂದಿಕ್ಕಿದ್ದು, ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.