'ಪ್ರೊಡಕ್ಷನ್ ನಂ.1' ಅಪ್ಪನಾಗುವ ಸಂಭ್ರಮದಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ

ಕಿರಿಕ್ ಪಾರ್ಟಿ ಖ್ಯಾತಿಯ ಸ್ಯಾಂಡಲ್‍ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಿಹಿಸುದ್ದಿಯೊಂದನ್ನು ಹಂಚಿಕೊಂಡಿದ್ದು, ಅವರು ಶೀಘ್ರದಲ್ಲೇ ತಂದೆಯಾಗುತ್ತಿದ್ದಾರಂತೆ.
ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ
ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ
Updated on: 
ಬೆಂಗಳೂರು: ಕಿರಿಕ್ ಪಾರ್ಟಿ ಖ್ಯಾತಿಯ ಸ್ಯಾಂಡಲ್‍ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಿಹಿಸುದ್ದಿಯೊಂದನ್ನು ಹಂಚಿಕೊಂಡಿದ್ದು, ಅವರು ಶೀಘ್ರದಲ್ಲೇ ತಂದೆಯಾಗುತ್ತಿದ್ದಾರಂತೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಖುಷಿ ಹಂಚಿಕೊಂಡಿದ್ದು, ಇನ್ ಸ್ಟಾಗ್ರಾಮ್ ನಲ್ಲಿ ಮಡದಿಯೊಂದಿಗಿರುವ ಫೋಟೋ ಪೋಸ್ಟ್ ಮಾಡಿರುವ ರಿಷಬ್, 'ಪ್ರಗತಿ ರಿಷಬ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಪ್ರೆಸೆಂಟ್ಸ್ ಪ್ರೊಡಕ್ಷನ್ ನಂ. 1′ ಎಂದು ಬರೆದುಕೊಂಡಿದ್ದಾರೆ. 
ಆ ಮೂಲಕ ಪರೋಕ್ಷವಾಗಿ ತಾವು ತಂದೆಯಾಗುತ್ತಿರುವ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕಾಲೇಜು ಹುಡುಗರ ಮನ ಗೆದ್ದಿದ್ದ ರಿಷಬ್, 'ಸರ್ಕಾರಿ ಹಿ. ಪ್ರಾ. ಶಾಲೆ ಕಾಸರಗೋಡು' ಸಿನಿಮಾ ಮೂಲಕ ಜಾದೂ ಮಾಡಿದ್ದಾರೆ. ಈ ಚಿತ್ರದ ರಿಷಬ್, ಮಕ್ಕಳ ಮೂಲಕ ಕನ್ನಡ ಪ್ರೀತಿಯನ್ನು ಮೆರೆದಿದ್ದರು. ಕರ್ನಾಟಕದ ಎಲ್ಲ ಭಾಗಗಳ ಜನರೂ ಈ ಚಿತ್ರವನ್ನು ಪ್ರೀತಿಯಿಂದ ವೀಕ್ಷಿಸಿ ಮೆಚ್ಚಿಕೊಂಡಿದ್ದರು. ಇದೀಗ ತಮ್ಮ ಮನೆಗೇ ಮಗುವೊಂದನ್ನು ಆಹ್ವಾನಿಸಲು ರಿಷಬ್ ತುದಿಗಾಲಲ್ಲಿ ನಿಂತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com