ನಟಿ ಪ್ರೀತಿ ಝಿಂಟಾ
ಸಿನಿಮಾ ಸುದ್ದಿ
#MeToo: ಟೀಕೆಗಳ ಬಳಿಕ ಕ್ಷಮೆಯಾಚಿಸಿದ ನಟಿ ಪ್ರೀತಿ ಝಿಂಟಾ
#ಮೀಟೂ ಅಭಿಯಾನ ಕುರಿತು ನಾನು ನೀಡಿದ್ದ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆಂದು ಬಾಲಿವುಡ್ ನಟಿ ಪ್ರೀತಿ ಝಿಂಟಾ ಅವರು ಮಂಗಳವಾರ ಹೇಳಿದ್ದಾರೆ...
ನವದೆಹಲಿ: #ಮೀಟೂ ಅಭಿಯಾನ ಕುರಿತು ನಾನು ನೀಡಿದ್ದ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆಂದು ಬಾಲಿವುಡ್ ನಟಿ ಪ್ರೀತಿ ಝಿಂಟಾ ಅವರು ಮಂಗಳವಾರ ಹೇಳಿದ್ದಾರೆ.
ಮೀಟೂ ಅಭಿಯಾನ ಕುರಿತು ಈ ಹಿಂದೆ ತಾವು ನೀಡಿದ್ದ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಾನು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಉದ್ದೇಶಪೂರ್ವಕವಾಗಿ ಯಾರಿಗೂ ನೋವು ಮಾಡುವ ಉದ್ದೇಶವಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆಂದು ಹೇಳಿದ್ದಾರೆ.
ಮೀಟೂ ಅಭಿಯಾನಕ್ಕೆ ನಾನು ದೊಡ್ಡ ಬೆಂಬಲಿಗಳಾಗಿದ್ದೆ. ಆದರೆ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಟೀಕೆ ಮಾಡುತ್ತಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಪ್ರತಿರೋಧ ವ್ಯಕ್ತಪಡಿಸುವ, ಹೋರಾಟ ಮಾಡುವ ಹಕ್ಕು ಪ್ರತೀಯೊಬ್ಬರಿಗೂ ಇದೆ. ನನ್ನ ಮೇಲೆ ದೌರ್ಜನ್ಯ ನಡೆದಿದ್ದರೆ, ನಾನೂ ಕೂಡಲೇ ಅದಕ್ಕೆ ದಿಟ್ಟ ಉತ್ತರವನ್ನು ನೀಡುತ್ತಿದ್ದೆ. ಘಟನೆ ನಡೆದ ಸಂದರ್ಭದಲ್ಲಿಯೇ ತಿರುಗೇಟು ನೀಡಿ ಇದೀ ಪ್ರಪಂಚ ನೋಡುವಂತೆ ಮಾಡುತ್ತಿದ್ದೆ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ