ಮಂಡ್ಯ ಬಸ್ ದುರಂತ ಹಿನ್ನೆಲೆ: ಗಣೇಶ್ ಅಭಿನಯದ 'ಆರೆಂಜ್ ' ಚಿತ್ರದ ಟ್ರೈಲರ್ ಬಿಡುಗಡೆ ಮುಂದೂಡಿಕೆ
ಮಂಡ್ಯ ಜಿಲ್ಲೆಯ ಕನಗನಮರಡಿಯಲ್ಲಿ ಇಂದು ಸಂಭವಿಸಿದ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ಬಿಡುಗಡೆಯಾಗಬೇಕಿದ್ದ ಆರೆಂಜ್ ಚಿತ್ರದ ಟ್ರೈಲರ್ ನ್ನು ಮುಂದೂಡಲಾಗಿದೆ.
ಬೆಂಗಳೂರು: ಮಂಡ್ಯ ಜಿಲ್ಲೆಯ ಕನಗನಮರಡಿಯಲ್ಲಿ ಇಂದು ಸಂಭವಿಸಿದ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಇಂದು ಬಿಡುಗಡೆಯಾಗಬೇಕಿದ್ದ ಆರೆಂಜ್ ಚಿತ್ರದ ಟ್ರೈಲರ್ ನ್ನು ಮುಂದೂಡಲಾಗಿದೆ.
ಪ್ರಶಾಂತ್ ರಾಜ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೆಂಜ್ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇಂದು ಸಂಜೆ 6 -05ಕ್ಕೆ ನಿಗದಿಯಾಗಿತ್ತು. ಆದರೆ ಬಸ್ ದುರಂತದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಇನ್ಸಾಟಾಗ್ರಾಮ್ ನಲ್ಲಿ ಗಣೇಶ್ ಈ ವಿಷಯವನ್ನು ತಿಳಿಸಿದ್ದಾರೆ.
ಮೃತರ ಕುಟುಂಬದ ದುಃಖದಲ್ಲಿ ನಾನೂ ಪಾಲುದಾರನಾಗಿ,ಇಂದು ಬಿಡುಗಡೆಯಾಗಬೇಕಿದ್ದ ಆರೆಂಜ್ ಚಿತ್ರದ ಟ್ರೈಲರ್ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಗಣೇಶ್ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕನಗನಮರಡಿಯಲ್ಲಿ ಬಸ್ ದುರಂತ ನಿಜಕ್ಕೂ ದುರದೃಷ್ಟಕರ.ವಿಧಿಯ ಕ್ರೌರ್ಯಕ್ಕೆ ಬಲಿಯಾದ ಮುಗ್ಧ ಜೀವಗಳ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಗಳಿಗೆ ದುಃಖ ಬರಿಸುವ ಶಕ್ತಿಯನ್ನು ದೇವರು ನೀಡಲಿ.ಮೃತರ ಕುಟುಂಬದ ದುಃಖದಲ್ಲಿ ನಾನೂ ಪಾಲುದಾರನಾಗಿ,ಇಂದು ಬಿಡುಗಡೆಯಾಗಬೇಕಿದ್ದ*ಆರೆಂಜ್*ಚಿತ್ರದ Trailer ನ್ನು ಮುಂದೂಡುತ್ತಿದ್ದೇನೆ pic.twitter.com/KQyTKWdkHX