ರೆಬೆಲ್ ಸ್ಟಾರ್ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ, ರಾಜಕಾರಣಿಗಳು

ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾದ ರೆಬೆಲ್ ಸ್ಟಾರ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.
ಡಾ. ಅಂಬರೀಷ್
ಡಾ. ಅಂಬರೀಷ್

ಬೆಂಗಳೂರು: ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾದ ರೆಬೆಲ್ ಸ್ಟಾರ್ ನಿಧನಕ್ಕೆ ಚಿತ್ರರಂಗದ ಗಣ್ಯರು,  ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ.

1972 ರಲ್ಲಿ ಸಿನಿಮಾ ಕ್ಷೇತ್ರ ಪ್ರವೇಶಿಸಿದ್ದ ಅಂಬರೀಷ್, 200 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.  ಆರಂಭದಲ್ಲಿ ಖಳನಟನಾಗಿ ಗುರುತಿಸಿಕೊಂಡಿದ್ದ ಅಂಬರೀಷ್ ನಂತರ ನಾಯಕ ನಟನಾಗಿ ತೆರೆ ಮೇಲೆ ಮಿಂಚಿದ್ದರು.  50 ವರ್ಷಗಳ ಕಾಲ ಕನ್ನಡ ಚಿತ್ರರಂಗದ ಮನೆ, ಮನಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಅಂಬರೀಷ್  ಅಭಿಮಾನಿಗಳ ಪಾಲಿಗೆ ನೆಚ್ಚಿನ ರೆಬೆಲ್ ಸ್ಟಾರ್ ಆಗಿದ್ದಾರೆ.

ಮೂರು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದ ಅಂಬರೀಷ್ ಒಂದು ಬಾರಿ ಕೇಂದ್ರ ಸಚಿವರೂ ಆಗಿದ್ದರು. ಸಿದ್ದರಾಮಯ್ಯ ಸಂಪುಟದಲ್ಲಿ ವಸತಿ  ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ರಾಜಕಾರಣಿಗಳು ಹಾಗೂ ಚಿತ್ರರಂಗದಿಂದ ಅಂಬಿ ಎಂದೇ ಕರೆಸಿಕೊಳ್ಳುತ್ತಿದ್ದ ರೆಬೆಲ್ ಸ್ಟಾರ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ  ಚಿತ್ರರಂಗದ ಗಣ್ಯರು, ರಾಜಕಾರಣಿಗಳಿಂದ  ಸಂತಾಪದ ಮಹಾಪೂರವೇ ಹರಿದುಬರುತ್ತಿದೆ.

ಕನ್ನಡ ಚಿತ್ರೋದ್ಯಮದಲ್ಲಿ ಪ್ರೀತಿ ಮತ್ತು ಪ್ರೀತಿಯ ಒಂದು ಯುಗ ಕೊನೆಗೊಂಡಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅಂಬರೀಷ್ ದೊಡ್ಡ ನಟ ಮಾತ್ರ ಆಗಿರಲಿಲ್ಲ. ಉತ್ತಮ ರಾಜಕಾರಣಿ, ಶ್ರೇಷ್ಠ ಮಾನವೀಯ ಗುಣ ಹೊಂದಿದ್ದರು. ಅವರ ನಿಧನಕ್ಕೆ ತೀವ್ರ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com