ಇಡೀ ಕನ್ನಡ ಚಿತ್ರರಂಗದ ದಂಡೇ ಭಾನುವಾರ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿ ಅಗಲಿದ ಚಿತ್ರರಂಗದ ಧೃವತಾರೆಗೆ ಅಂತಿಮ ವಿದಾಯ ಸಲ್ಲಿಸಿತು. ಆದರೆ, ರಮ್ಯಾ ಮಾತ್ರ ಬರಲಿಲ್ಲ. ಬದಲಿಗೆ ಟ್ವಿಟರ್ ನಲ್ಲಿ ಅಂಬರೀಷ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಸುಮ್ಮನಾಗಿದ್ದಾರೆ. ಅಭಿಮಾನಿಗಳ ಆಕ್ರೋಶದ ಹಿನ್ನಲೆಯಲ್ಲಿ ಸೋಮವಾರ ಮಂಡ್ಯ ಅಥವಾ ಬೆಂಗಳೂರಿನಲ್ಲಿ ನಡೆಯುವ ಅಂತಿಮ ಸಂಸ್ಕಾರದಲ್ಲಿ ರಮ್ಯಾ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.