ಬೆಂಗಳೂರು: ಬೆಂಗಳೂರು: ಸ್ಯಾಂಡಲ್ ವುಡ್ ರಾಕಿಂಗ್ ಸ್ಟಾರ್ ಯಶ್ ಇದೀಗ ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ರನ್ನೇ ಹಿಂದಿಕ್ಕಿದ್ದಾರೆ.
ಪ್ರಸ್ತುತ ಯಶ್ ಅಭಿನಯದ ಕೆಜಿಎಫ್ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದು, ಕೇವಲ ಕರ್ನಾಟಕ ಮಾತ್ರವಲ್ಲದೇ ಯಶ್ ಅಭಿನಯದ ಚಿತ್ರ ಕೆಜಿಎಫ್ ಭಾರತದ ಮೊದಲನೇ ಬಹು ನಿರೀಕ್ಷಿತ ಚಿತ್ರವಾಗಿದೆ.
ಹೌದು.. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಿತ್ರದ ಹವಾ ಎಷ್ಟರ ಮಟ್ಟಿಗಿದೆ ಅಂದ್ರೆ, ಖ್ಯಾತ ಸಿನಿಮಾ ರೇಟಿಂಗ್ ವೆಬ್ ಸೈಟ್ ಐಎಂಡಿಬಿಯ ಮೋಸ್ಟ್ ಆ್ಯಂಟಿಸಿಪೇಟೆಡ್ ಗ್ಲೋಬಲ್ ಮೂವಿಸ್ ಹಾಗೂ ಟಿವಿ ಟ್ರೆಂಡಿಂಗ್ ನ ಹಲವು ಭಾಷೆಗಳ ಚಿತ್ರಗಳ ಲಿಸ್ಟ್ನಲ್ಲಿ ಅಗ್ರಸ್ಥಾನಕ್ಕೇರಿದೆ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿನಯದ ಝೀರೋ ಚಿತ್ರ ಎರಡನೇ ಸ್ಥಾನದಲ್ಲಿದೆ.
ಇನ್ನು ಪಟ್ಟಿಯಲ್ಲಿ ಯಶ್ ಅಭಿನಯದ ಕೆಜಿಎಫ್ ಚಿತ್ರ 56.8 ರೇಟಿಂಗ್ಸ್ ನೊಂದಿಗೆ ಮೊದಲ ಸ್ಥಾನದಲ್ಲಿದ್ದು ಶಾರುಖ್ ಅಭಿನಯದ ಝೀರೋ ಶೇ.19.4ರಷ್ಟು ರೇಟಿಂಗ್ಸ್ ನೊಂದಿಗೆ ಎರಡನೇ ಸ್ಥಾನದಲ್ಲಿದೆ.
ಉಳಿದಂತೆ ಐಎಂಡಿಬಿಯ ಭಾರತದ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಕ್ರಮವಾಗಿ ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ಒಡಿಯಾನ್, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಕೇದಾರನಾಥ್, ರಣವೀರ್ ಸಿಂಗ್ ಅಭಿನಯದ ಸಿಂಬ ಚಿತ್ರಗಳು ಟಾಪ್ 10 ಪಟ್ಟಿಯಲ್ಲಿವೆ.