ಶಿವಣ್ಣ-ಸುದೀಪ್ ಅಭಿಮಾನಿಗಳಿಗೆ ಶಿವರಾತ್ರಿ, ಮಧ್ಯರಾತ್ರಿ 12 ಗಂಟೆಯಿಂದಲೇ 'ದಿ ವಿಲನ್' ಶೋ ಶುರು!

ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ದಿ ವಿಲನ್ ಚಿತ್ರ ಇದೇ ಅಕ್ಟೋಬರ್ 18ರಂದು ದೇಶಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದ್ದು ಚಿತ್ರದ ಮೊದಲ ಶೋ ಮಧ್ಯರಾತ್ರಿಯಿಂದಲೇ ಶುರುವಾಗಲಿದೆ...
ದಿ ವಿಲನ್
ದಿ ವಿಲನ್
ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ದಿ ವಿಲನ್ ಚಿತ್ರ ಇದೇ ಅಕ್ಟೋಬರ್ 18ರಂದು ದೇಶಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದ್ದು ಚಿತ್ರದ ಮೊದಲ ಶೋ ಮಧ್ಯರಾತ್ರಿಯಿಂದಲೇ ಶುರುವಾಗಲಿದೆ. 
ಜೋಗಿ ಪ್ರೇಮ್ ನಿರ್ದೇಶನದ ದಿ ವಿಲನ್ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದು ಇದನ್ನೇ ತನ್ನ ಲಾಭಕೋಸ್ಕರ ಬಳಸಿಕೊಳ್ಳಲು ಚಿತ್ರತಂಡ ಮುಂದಾಗಿದ್ದು ಬುಧವಾರ ಮಧ್ಯರಾತ್ರಿ 12 ಗಂಟೆಯಿಂದಲೇ ಶೋ ಶುರುವಾಗಲಿದೆ. 
ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಮೈಸೂರು, ಹುಬ್ಬಳ್ಳಿ, ಹೊಸಪೇಟೆ ಸೇರಿದಂತೆ ನಾನು ಕಡೆಗಳಲ್ಲಿ ಬೆಳಗ್ಗೆ 4 ಗಂಟೆಯಿಂದಲೇ ಪ್ರದರ್ಶನ ಶುರುವಾಗಲಿದ್ದು ಇದು ಕನ್ನಡದ ಚಿತ್ರರಂಗದ ಇತಿಹಾಸದಲ್ಲೇ ಮೊದಲು ಎಂದು ನಿರ್ದೇಶಕ ಪ್ರೇಮ್ ಹೇಳಿದ್ದಾರೆ. 
ದಿ ವಿಲನ್ ಚಿತ್ರದ ಬಿಡುಗಡೆಯಾಗುತ್ತಿರುವ ಚಿತ್ರಮಂದಿರಗಳ ಮುಂಭಾಗದಲ್ಲಿ ಅದಾಗಲೇ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ. ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com