ಇನ್ನು ನಿರ್ದೇಶಕ ಪ್ರೇಮ್ ನಿರ್ದೇಶನದ, ನಟ ಶಿವರಾಜ್ ಕುಮಾರ್ ಮತ್ತು ಸುದೀಪ್ ಇದೇ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಚಿತ್ರ ದಿ ವಿಲನ್ ಇಂದು ತೆರೆಕಂಡಿದ್ದು, ದೇಶಾದ್ಯಂತ ಸುಮಾರು 600 ಚಿತ್ರ ಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದರಿಂದ ಇಂದು ಮುಂಜಾನೆಯಿಂದಲೇ ಚಿತ್ರ ಪ್ರದರ್ಶನ ಆರಂಭ ಮಾಡಲಾಗಿದ್ದು, ಚಿತ್ರಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ.