ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿ ವಿರುದ್ಧ ಮುಗಿಬಿದ್ದ ಯಶ್ ಅಭಿಮಾನಿಗಳು!

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ನಟರ ಅಭಿಮಾನಿಗಳ ನಡುವೆ ಕಿತ್ತಾಟಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳು...
ಉಪೇಂದ್ರ, ಯಶ್
ಉಪೇಂದ್ರ, ಯಶ್
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ನಟರ ಅಭಿಮಾನಿಗಳ ನಡುವೆ ಕಿತ್ತಾಟಗಳು ಹೆಚ್ಚಾಗಿ ಕೇಳಿ ಬರುತ್ತಿದ್ದು ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅಭಿಮಾನಿಗಳ ವಿರುದ್ಧ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕಿಚಾಯಿಸಿದ್ದಾರೆ. 
ಉಪೇಂದ್ರ ಅಭಿಮಾನಿ ಗೋಕುಲ್ ಎಂಬಾತನಿಗೆ ಫೇಸ್ ಬುಕ್ ನಲ್ಲಿ ಯಶ್ ಅಭಿಮಾನಿಗಳು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಗೋಕುಲ್ ಯಶ್ ಅಭಿಮಾನಿಗಳು ಅವಹೇಳನಕಾರಿ ಪೋಸ್ಟ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. 
ಟ್ರೋಲ್ ಅಧಿಪತಿ ಹಾಗೂ Who Trolls Yash ಎಂಬ ಫೇಸ್ ಬುಕ್ ಪೇಜ್ ನಲ್ಲಿ ನನ್ನ ಫೋಟೋ ಬಳಸಿ. ನನ್ನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಗೋಕುಲ್ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com