#MeToo ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ, ಶಿವಣ್ಣ ಹೇಳಿದ್ದೇನು?

ಸ್ಯಾಂಡಲ್‌ ವುಡ್‌ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಮೀಟೂ ಅಭಿಯಾನವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಇದೇ ಮೊದಲ ಬಾರಿಗೆ ನಟ ಶಿವರಾಜ್‌ಕುಮಾರ್‌ ಮೀಟೂ ಕುರಿತು ಮಾತನಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಸ್ಯಾಂಡಲ್‌ ವುಡ್‌ನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿರುವ ಮೀಟೂ ಅಭಿಯಾನವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಇದೇ ಮೊದಲ ಬಾರಿಗೆ ನಟ ಶಿವರಾಜ್‌ಕುಮಾರ್‌ ಮೀಟೂ ಕುರಿತು ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಮೀಟೂ ಬಗ್ಗೆ ಮಾತನಾಡಲು ಆಗಲ್ಲ. ಇಂಡಸ್ಟ್ರಿಗೆ ಸಂಬಂಧಿಸಿದ ವಿಚಾರಗಳೆಂದರೆ ನೋವಾಗುತ್ತದೆ. ವಾಣಿಜ್ಯ ಮಂಡಳಿಯಲ್ಲಿ ಆದಷ್ಟು ಬೇಗ ಸಮಸ್ಯೆ ಬಗೆಹರಿಯುತ್ತದೆ. ಯಾಕೆಂದರೆ ಮಂಡಳಿ ಮೇಲೆ ಒಂದು ಗೌರವವಿದ್ದು, ನಮ್ಮಲ್ಲೇ ಎಲ್ಲ ವಿಚಾರಗಳನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ಮೀಟೂ ಅವರವರ ಭಾವನೆಗಳ ಮೇಲೆ ನಿರ್ಧಾರವಾಗುತ್ತವೆ. ಅದು ತಪ್ಪಾ, ಸರಿನಾ ಎಂದು ಹೇಳಲಾಗುವುದಿಲ್ಲ. ನಾನು ಯಾರನ್ನು ನೋಯಿಸಲು ಇಷ್ಟಪಡುವುದಿಲ್ಲ. ಎಲ್ಲರೂ ಒಳ್ಳೆಯವರೇ. ದೇವರಲ್ಲಿ ಪ್ರಾರ್ಥಿಸೋಣ ಆದಷ್ಟು ಬೇಗ ಇದು ಬಗೆಹರಿಯಲಿ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com