ಬೆಂಗಳೂರು: ಡಾ. ರಾಜ್ ಕುಮಾರ್ ಅಭಿನಯದ 'ಧ್ರುವತಾರೆ' ಸೇರಿದಂತೆ ಅನುರಾಗ ಅರಳಿತು, ರಥಸಪ್ತಮಿ, ನಂಜುಂಡಿ ಕಲ್ಯಾಣಿ, ಮನ ಮೆಚ್ಚಿದ ಹುಡುಗಿಯಂತಹ ಹಲವು ಹಿಟ್ ಚಿತ್ರಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ಎಂ.ಎಸ್.ರಾಜಶೇಖರ್ ಅವರು ಸೋಮವಾರ ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 75 ವರ್ಷದ ರಾಜಶೇಖರ್ ಅವರನ್ನು ಇಂದು ಬೆಳಗ್ಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್ ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕನ್ನಡ ಚಿತ್ರರಂಗಕ್ಕೆ ಹಲವು ಯಶಸ್ವಿ ಚಿತ್ರಗಳನ್ನು ನೀಡಿದ್ದ ರಾಜಶೇಖರ್ ಅವರು, ಹಿಟ್ ಡೈರೆಕ್ಟರ್ ಎಂದೇ ಖ್ಯಾತಿ ಪಡೆದಿದ್ದರು.