ರಶ್ಮಿಕಾ ಅವರ ಬಗ್ಗೆ ಈಗಾಗಲೇ ನಿರ್ದಿಷ್ಟ ಅಭಿಪ್ರಾಯ ರೂಪುಗೊಂಡಿದೆ. ಅಭಿಪ್ರಾಯ ರೂಪುಗೊಳ್ಳುವ ರೀತಿಯಲ್ಲೇ ಕೆಲವೊಂದು ಸಂಗತಿಗಳನ್ನು ತೋರಿಸಲಾಗಿದೆ. ಆದ್ದರಿಂದ ನಾನು ಯಾರನ್ನೂ ಸಹ ದೂಷಿಸುವುದಿಲ್ಲ. ನಾವು ನೋಡಿದ್ದನ್ನೇ, ಕೇಳಿದ್ದನ್ನೇ ನಿಜ ಎಂದು ನಂಬುತ್ತೇವೆ. ಆದರೆ ಅದೇ ಸತ್ಯ ಆಗಿರಬೇಕೆಂದೇನು ಇಲ್ಲ. ಮತ್ತೊಂದು ದೃಷ್ಟಿಕೋನದಿಂದ ಯೋಚನೆ ಮಾಡದೇಯೇ ನಾವು ನಿರ್ಧಾರಕ್ಕೆ ಬಂದುಬಿಡುತ್ತೇವೆ. ರಶ್ಮಿಕಾ ಮಂದಣ್ಣ ಅವರನ್ನು ನಾನು 2 ವರ್ಷಗಳಿಂದ ನೋಡಿದ್ದೇನೆ, ಅವರೇನೆಂದು ನಿಮ್ಮೆಲ್ಲರಿಗಿಂತ ನನಗೆ ಚೆನ್ನಾಗಿ ಗೊತ್ತು. ದಯವಿಟ್ಟು ಅವರ ಬಗ್ಗೆ ಕಪೋಲಕಲ್ಪಿತ ಸುದ್ದಿಗಳನ್ನು ನಿಜ ಎಂದು ನಂಬಬೇಡಿ. ಅವರನ್ನು ಶಾಂತಿ ಇಂದ ಇರಲು ಬಿಡಿ. ಶೀಘ್ರವೇ ಈ ಎಲ್ಲ ಗೊಂದಲಗಳೂ ಕೊನೆಯಾಗಲಿವೆ, ನಿಜ ಏನೆಂದು ತಿಳಿಯಲಿದೆ, ಮಾಧ್ಯಮಗಳಲ್ಲಿನ ಕಪೋಲಕಲ್ಪಿತ ಸುದ್ದಿಗಳನ್ನು ನಂಬಬೇಡಿ" ಎಂದು ರಕ್ಷಿತ್ ಶೆಟ್ಟಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.