ನಟ ಕಿಚ್ಚಾ ಸುದೀಪ್ ಕ್ಷಮೆ ಕೋರಿದ್ದು ಏಕೆ ಗೊತ್ತಾ?

ನಟ ಕಿಚ್ಚಾ ಸುದೀಪ್ ತಮ್ಮ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ, ವಿಡಿಯೋ ಮೂಲಕ ಸಂದೇಶ ರವಾನಿಸಿ ಕ್ಷಮೆ ಕೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ದಾವಣಗೆರೆ: ನಟ ಕಿಚ್ಚಾ ಸುದೀಪ್ ತಮ್ಮ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ, ವಿಡಿಯೋ ಮೂಲಕ ಸಂದೇಶ ರವಾನಿಸಿ ಕ್ಷಮೆ ಕೇಳಿದ್ದಾರೆ.
ನಟ ಕಿಚ್ಚ ಸುದೀಪ್ ನಿನ್ನೆ ದಾವಣಗೆರೆ ಜಿಲ್ಲೆಗೆ ಆಗಮಿಸಬೇಕಿತ್ತು. ಆದರೆ ಕಾರಣಾಂತರದಿಂದ ಸುದೀಪ್ ಬರಲು ಸಾಧ್ಯವಾಗದೇ ವಿಡಿಯೋ ಮೂಲಕ ಸಂದೇಶ ರವಾನಿಸಿ ಕ್ಷಮೆ ಕೇಳಿದ್ದಾರೆ. ದಾವಣಗೆರೆಯ ಬಿಐಟಿ ಕಾಲೇಜ್ ರೋಡಿನಲ್ಲಿರುವ ಕಿಚ್ಚ ಸುದೀಪ್, ದೊನ್ನೆ ಬಿರಿಯಾನಿ ಹೋಟೆಲ್ ಪ್ರಾರಂಭೋತ್ಸವಕ್ಕೆ ಸುದೀಪ್ ಅವರು ಆಗಮಿಸಬೇಕಿತ್ತು. 
ನಿರ್ದೇಶಕ ನಂದ ಕಿಶೋರ್ ಒಡೆತನದ ದೊನ್ನೆ ಬಿರಿಯಾನಿ ಹೋಟೆಲ್ ಇದಾಗಿದ್ದು, ಈ ಹೋಟೆಲ್ ಉದ್ಘಾಟನೆಗೆ ಸುದೀಪ್ ಬರಬೇಕಿತ್ತು. ಆದ್ದರಿಂದ ಇಂದು ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಾರಂಭೋತ್ಸವವನ್ನು ನಂದ ಕಿಶೋರ್ ಮುಂದಕ್ಕೆ ಹಾಕಿದ್ದಾರೆ.
ಈ ಬಗ್ಗೆ ಸುದೀಪ್ ಅವರು ವಿಡಿಯೋ ಮೂಲಕ ಸಂದೇಶ್ ರವಾನಿಸಿದ್ದಾರೆ. 'ಎಲ್ಲರಿಗೂ ಕಿಚ್ಚನ ಸಮಸ್ಕಾರ, ಇಂದು ನಾನು ದಾವಣಗೆರೆಯಲ್ಲಿರುವ ಒಂದು ಹೋಟೆಲ್ ಓಪನಿಂಗ್ ಗೆ ಬರಬೇಕಿತ್ತು. ಕಾರಣಾಂತರದಿಂದ ಬರಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ, ಇದನ್ನು ಮುಂದಕ್ಕೆ ಹಾಕಿ ನಾನು ಅಕ್ಟೋಬರ್ 19 ರಂದು ನಾನು ಬರುತ್ತಿದ್ದೇನೆ. ಶಾಸಕ ಎಸ್ ವಿ ರಾಮಚಂದ್ರಪ್ಪ, ಹಾಗೂ ವಾಲ್ಮೀಕಿ ಶ್ರೀ ಸೇರಿದಂತೆ ನನ್ನನ್ನು ಕರೆದಿದ್ದರೋ ಅವರಿಗೆಲ್ಲ ನಂದಕಿಶೋರ್ ಪರ ಕ್ಷಮೆ ಕೇಳುತ್ತಿದ್ದೇನೆ. ಕಾರಣಾಂತರದಿಂದ ನಾನು ಹೈದರಾಬಾದಿನಲ್ಲಿ ಉಳಿದುಕೊಂಡಿದ್ದೇನೆ. 19ಕ್ಕೆ ಖಂಡಿತ ನಾನು ಬರುತ್ತೇನೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com