ಮೈಸೂರು: ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಗೆ ಪಿತೃ ವಿಯೋಹ್ಗವಾಗಿದೆ. ವಿಜಯ್ ಪ್ರಕಾಶ್ ಅವರ ತಂದೆ ಎಲ್. ರಾಮಶೇಷು (75)ವಯೋಸಹಜ ಅನಾರೋಗ್ಯದಿಂದಾಗಿ ಮೃತಪಟ್ಟಿದ್ದಾರೆ.
ಭಾನುವಾರ ಬೆಳಿಗ್ಗೆ ಅವರು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ವಿಜಯ್ ಪ್ರಕಾಶ್ ಕುಟುಂಬ ಮೂಲಗಳು ಹೇಳಿದೆ.
ರಾಮಶೇಷು, ವಿದ್ವಾನ್ ರಾಮಶೇಷು ಎಂದೇ ಖ್ಯಾತವಾಗಿದ್ದ ಇವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗಾಯಕ ವಿಜಯ್ ಪ್ರಕಾಶ್ ಈಗ ಅಮೆರಿಕಾ ಪ್ರವಾಸದಲ್ಲಿದ್ದು ವಿಷಯ ತಿಳಿದು ಭಾರತಕ್ಕೆ ಹಿಂದಿರುಗುತ್ತಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ ಎಂದು ಕುಟುಬ ಸದಸ್ಯರು ಹೇಳಿದ್ದಾರೆ.