ಜಗ್ಗೇಶ್, ಸುದೀಪ್, ಶ್ರೀಮುರುಳಿ
ಸಿನಿಮಾ ಸುದ್ದಿ
'ಬನ್ನಿ ಒಬ್ಬರಿಗೊಬ್ಬರು ಕೈ ಜೋಡಿಸಿ ಉತ್ತರ ಕರ್ನಾಟಕದ ಮಳೆ ಸಂತ್ರಸ್ತರಿಗೆ ಸಹಾಯ ಮಾಡೋಣ'
ಉತ್ತರ ಕರ್ನಾಟಕ ಹಾಗೂ ರಾಜ್ಯದ ಇತರೇ ಜಿಲ್ಲೆಗಳು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು..
ಬೆಂಗಳೂರು: ಉತ್ತರ ಕರ್ನಾಟಕ ಹಾಗೂ ರಾಜ್ಯದ ಇತರೇ ಜಿಲ್ಲೆಗಳು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಸ್ಯಾಂಡಲ್ ವುಡ್ ಕಲಾವಿದರು ಮುಂದಾಗಿದ್ದಾರೆ.
ವರುಣನ ರೌದ್ರಾವತಾರಕ್ಕೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ 10 ಜಿಲ್ಲೆಗಳು ಅಕ್ಷರಶಃ ತತ್ತರಿಸಿ ಹೋಗಿದೆ. ಪ್ರವಾಹಕ್ಕೆ ಲಕ್ಷಾಂತರ ಜನರು, ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ನಮ್ಮ ಕೈಲಾದ ಸಹಾಯ ಮಾಡೋಣ ಎಂದು ಸುದೀಪ್ ಟ್ವಿಟ್ಟರ್ ಮೂಲಕ ಕೋರಿಕೊಂಡಿದ್ದಾರೆ.
ನನ್ನ ಸ್ನೇಹಿತರ ಬಳಗಕ್ಕೆ ನನ್ನ ಕೋರಿಕೆ ಎಂದು ಬರೆದು ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಜೊತೆಗೆ ಹಲವು ಸ್ಯಾಂಡಲ್‍ವುಡ್ ಕಲಾವಿದರು ಕೂಡ ಪ್ರವಾಹ ಸಂತ್ರಸ್ತರಿಗೆ ನೆರವಾಗೋಣ, ಸಹಕರಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾದ್ದಾರೆ.
ನನ್ನ ಸ್ನೇಹಿತರ ಬಳಗಕ್ಕೆ ನನ್ನ ಚಿಕ್ಕ ಕೋರಿಕೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ