ಕಾರು ಅಡ್ಡಗಟ್ಟಿ ನಟ ಕೋಮಲ್ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ

ಅಪರಿಚಿತ ವ್ಯಕ್ತಿಯೊಬ್ಬ ಸ್ಯಾಂಡಲ್ ವುಡ್ ನಟ ಕೋಮಲ್ ಅವರ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ರೈಲ್ವೇ ಕೆಳ ಸೇತುವೆ ಬಳಿ ನಡೆದಿದೆ.
ಗಾಯಗೊಂಡ ಕೋಮಲ್
ಗಾಯಗೊಂಡ ಕೋಮಲ್
Updated on: 

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಸ್ಯಾಂಡಲ್ ವುಡ್ ನಟ ಕೋಮಲ್ ಅವರ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ರೈಲ್ವೇ ಕೆಳ ಸೇತುವೆ ಬಳಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿ, ಕೋಮಲ್ ಅವರ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾನೆ. ಹೊಡೆತದ ಏಟಿಗೆ ಕೋಮಲ್ ಮುಖ ಹಾಗೂ ಮೂಗಿಗೆ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಆದರೆ, ಹಲ್ಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣಾ ಪೊಲೀಸರು, ಹಲ್ಲೆ ನಡೆಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com