'ಬನಾರಸ್' ಮೂಲಕ ಜಮೀರ್ ಪುತ್ರ ಝೈದ್ ಖಾನ್ ಚಿತ್ರರಂಗಕ್ಕೆ ಪಾದಾರ್ಪಣೆ, ಜಯತೀರ್ಥ ನಿರ್ದೇಶನ!

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಬನಾರಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಚಿತ್ರಕ್ಕೆ ಬೆಲ್ ಬಾಟಂ ಚಿತ್ರದ ನಿರ್ದೇಶಕ ಜಯತೀರ್ಥ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಝೈದ ಖಾನ್-ಸೋನಾಲ್-ಜಯತೀರ್ಥ

ಚಿತ್ರದ ಮುಹೂರ್ತ ಸಿಂಪಲ್ ಆಗಿ ನಡೆಸಲು ಚಿತ್ರತಂಡ ತೀರ್ಮಾನಿಸಿದೆ. ಆಗಸ್ಟ್ ಕೊನೆಯಲ್ಲಿ ವಾರಣಾಸಿಯಲ್ಲಿ ಚಿತ್ರದ ಚಿತ್ರೀಕರಣ ಆರಂಭಗೊಳ್ಳಲಿದ್ದು ಒಂದು ತಿಂಗಳ ಕಾಲ ಚಿತ್ರೀಕರಣ ನಡೆಯಲಿದೆ. ಚಿತ್ರಕ್ಕೆ ವೈಬಿ ರೆಡ್ಡಿ ಬಂಡವಾಳ ಹೂಡುತ್ತಿದ್ದಾರೆ. 

ಝೈದ್ ಖಾನ್ ಗೆ ಜೋಡಿಯಾಗಿ ಪಂಚತಂತ್ರದ ನಾಯಕಿ ಸೋನಾಲ್ ಮೊಂಟೇರಿಯೋ ಅಭಿಯಿಸಲಿದ್ದಾರೆ. ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ಸಂಯೋಜಿಸಲಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com