ಡಿಸೆಂಬರ್ 21ಕ್ಕೆ 'ಕೆಜಿಎಫ್ ಚಾಪ್ಟರ್ 2 ಫಸ್ಟ್ ಲುಕ್' ಬಿಡುಗಡೆ: ಸಂಜಯ್ ದತ್ ಏನಂದ್ರು ಗೊತ್ತಾ?

ಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ  ಬಹು ನಿರೀಕ್ಷಿತ 'ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗಿದ್ದು, ಡಿಸೆಂಬರ್ 21ರಂದು ಫಸ್ಟ್ ಲುಕ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
ಯಶ್, ಸಂಜಯ್ ದತ್
ಯಶ್, ಸಂಜಯ್ ದತ್
Updated on: 

ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ  ಬಹು ನಿರೀಕ್ಷಿತ 'ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣ ಭರದಿಂದ ಸಾಗಿದ್ದು, ಡಿಸೆಂಬರ್ 21ರಂದು ಫಸ್ಟ್ ಲುಕ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ಕಳೆದ ವರ್ಷ ಡಿಸೆಂಬರ್ 21 ರಂದು ಕೆಜಿಎಫ್ ಚಾಪ್ಟರ್ 1 ಚಿತ್ರ ವಿಶ್ವದಾದ್ಯಂತ  ಬಿಡುಗಡೆಯಾಗಿತ್ತು. ಅದೇ ಸೆಂಟಿಮೆಂಟಿಗೆ ಕಟ್ಟು ಬಿದ್ದಿರುವ  ಚಿತ್ರತಂಡ   ಇದೇ ಡಿಸೆಂಬರ್ 21 ರಂದು ಕೆಜಿಎಫ್ ಚಾಪ್ಟರ್ 1 ಮೊದಲ ವರ್ಷಾಚರಣೆ ಸಂದರ್ಭದಲ್ಲಿ ಚಾಪ್ಟರ್ 2 ಫಸ್ಟ್ ಲುಕ್ ಬಿಡುಗಡೆ ಮಾಡುತ್ತಿದೆ. ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟರ್ ಖಾತೆಯಲ್ಲಿ ಈ ವಿಚಾರವನ್ನು ಸ್ಪಷ್ಪಪಡಿಸಿದ್ದಾರೆ. 

ಕೆಜಿಎಫ್ ಚಾಪ್ಟರ್ 2ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಪವರ್ ಪುಲ್ ಪಾತ್ರವಾಗಿದ್ದು, ಅಧೀರನ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದೆ.  ಕೆಜಿಎಫ್ ಚಿತ್ರದ ಭಾಗವಾಗಿರುವುದರಿಂದ ಅದ್ಬುತ ಅನುಭವವಾಗಿರುವುದಾಗಿ ಸಂಜಯ್ ದತ್ ಟ್ವೀಟ್ ಮಾಡಿದ್ಗಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com