ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಇಲ್ಲ: ನಟ ಮೋಹನ್ ಲಾಲ್

ಲಯಾಳಂ ಸೂಪರ್ ಸ್ಟಾರ್ ಮೋಗನ್ ಲಾಲ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ, ಈ ಸಂಬಂಧ ಬಿಜೆಪಿ ವರಿಷ್ಠರ ಜೊತೆ ಚರ್ಚೆ...
ಮೋಹನ್ ಲಾಲ್
ಮೋಹನ್ ಲಾಲ್
ಕೇರಳ: ಮಲಯಾಳಂ ಸೂಪರ್ ಸ್ಟಾರ್ ಮೋಗನ್ ಲಾಲ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ, ಈ ಸಂಬಂಧ ಬಿಜೆಪಿ ವರಿಷ್ಠರ ಜೊತೆ ಚರ್ಚೆ ನಡೆಸಿದ್ದಾರೆ ಎಂಬ ಎಲ್ಲಾ ಊಹಾ ಪೋಹಗಳಿಗೂ ಸ್ವತಃ ಮೋಹನ್ ಲಾಲ್ ಅವರೇ ತೆರೆ ಎಳೆದಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ತಾವು ಯಾವುದೇ ಪಕ್ಷದಿಂದಲೂ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ನಾನು ನಟನೆಯನ್ನು ಪ್ರೀತಿಸುತ್ತೇನೆ, ಹೀಗಾಗಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಮೋಹನ್ ಲಾಲ್ ಹೇಳಿದ್ದಾರೆ.
ನಟನಾಗಿ ನಾನು ನನ್ನ ವೃತ್ತಿಯಲ್ಲಿ ಸಂತೋಷವಾಗಿದ್ದೇನೆ, ನನಗೆ ನಟನೆ ಸಾಕಷ್ಟು ಸ್ವಾತಂತ್ರ್ಯ ನೀಡಿದೆ,  ನೀವು ರಾಜಕಾರಣಿಯಾದರೇ  ಹಲವು ಮಂದಿ ನಮ್ಮನ್ನು ಅವಲಂಬಿಸುತ್ತಾರೆ, ನಾನು ಅವರಿಗಾಗಿ ಮಾಡಬೇಕು ಎಂಬುದನ್ನು ತಿಳಿದಿದ್ದೇನೆ ಎಂದು ಮೋಹನ್ ಲಾಲ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com