
ಬೆಂಗಳೂರು: 2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಆಯ್ಕೆಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡ ಆಯ್ಕೆ ಸಲಹಾ ಸಮಿತಿಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ, ಡಾ.ರಾಜ್‍ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಡಾ.ವಿಷ್ಣು ವರ್ಧನ್ ಪ್ರಶಸ್ತಿಗಳನ್ನು ಆಯ್ಕೆ ಮಾಡಲು ಪತ್ರಕರ್ತೆ ಹಾಗೂ ನಿರ್ದೇಶಕಿ ಡಿ.ಸುಮನಾ ಕಿತ್ತೂರು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.
ಸದಸ್ಯರಾಗಿ ನಿರ್ಮಾಪಕ ಯಾಕೂಬ್ ಖಾದರ್ ಗುಲ್ವಾಡಿ, ನಿರ್ದೇಶಕ ಲೆಸ್ಲಿ ಕರ್ವಾಲೋ, ರಂಗಭೂಮಿ ಕಲಾವಿದರಾದ ವಿ.ಲಕ್ಷ್ಮೀಪತಿ, ಚಿನ್ಮಯ್, ಛಾಯಾಗ್ರಾಹಕ ಬಿ.ಎಲ್.ಬಾಬು, ಸಂಕಲನಕಾರ ಎಸ್. ಶಿವಕುಮಾರಸ್ವಾಮಿ, ಹಿನ್ನೆಲೆ ಗಾಯಕಿ ಅರ್ಚನಾ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಅಥವಾ ಪ್ರತಿನಿಧಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Advertisement