ಹುಟ್ಟುಹಬ್ಬದಂದು ಯಶ್ ಭೇಟಿ ಸಾಧ್ಯವಾಗದ ಕಾರಣ ಆತ್ಮಹತ್ಯೆಗೆ ಅಭಿಮಾನಿ ಯತ್ನ!

ಹುಟ್ಟು ಹಬ್ಬದಂದು ರಾಕಿಂಗ್ ಸ್ಟಾರ್ ಯಶ್ ಭೇಟಿಯಾಗಿಲ್ಲವೆಂದು ಬೇಸರಗೊಂಡ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಯಶ್
ಯಶ್
Updated on
ಬೆಂಗಳೂರು: ಹುಟ್ಟು ಹಬ್ಬದಂದು ರಾಕಿಂಗ್ ಸ್ಟಾರ್ ಯಶ್ ಭೇಟಿಯಾಗಿಲ್ಲವೆಂದು ಬೇಸರಗೊಂಡ ಅಭಿಮಾನಿಯೊಬ್ಬ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ನಟ ಯಶ್ ಮನೆ ಮುಂದೆ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಯನ್ನು ರವಿ ಎಂದು ಗುರುತಿಸಲಾಗಿದ್ದು ಈತ ಯಶ್ ಮನೆ ಮುಂದೆ ಬೆಂಕಿ ಹಚ್ಚಿಕೊಂಡಿದ್ದು ಬೆಂಕಿ ಉರಿಯುತ್ತಿರುವಾಗಲೇ ರಸ್ತೆ ದಾಟಿದ್ದಾನೆ. 
ಇದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಿದ್ದು ಗಾಯಾಳು ಅಭಿಮಾನಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. 
ಸದ್ಯ ಗಾಯಾಳು ರವಿ ಪರಿಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಗಿರಿನಗರ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇನ್ನು ಕಳೆದ ಡಿಸೆಂಬರ್ ನಲ್ಲಿ ಸ್ಯಾಂಡಲ್ ವುಡ್ ನ ಮೇರು ನಟರಾಗಿದ್ದ  ಅಂಬರೀಶ್ ಸಾವನ್ನಪ್ಪಿದ್ದ ಕಾರಣ ಯಶ್ ತಾವಿಂದು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com